ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಂದ ವಿವಿಧ ಸ್ಥಳಗಳ ಪರಿಶೀಲನೆ

ಗದಗ: ರಾಜ್ಯ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎಂ.ಟಿ.ರೇಜು ಅವರಿಂದು ನಗರದ ವಾಲ್ಮೀಕಿ ಭವನದಲ್ಲಿ ನೆಲಸಿರುವ ವಲಸೆ ಕಾರ್ಮಿಕರಿಗೆ ಜಿಲ್ಲಾಡಳಿತದಿಂದ ಒದಗಿಸಲಾಗಿರುವ ಸೌಲಭ್ಯಗಳ ಕುರಿತು ಪರೀಶಿಲಿಸಿದರು.

ನಂತರ ಜಿಲ್ಲೆಯಲ್ಲಿ ಕೋವಿಡ್-19 ಚಿಕಿತ್ಸೆಗಾಗಿ ನಿಗದಿಪಡಿಸಲಾದ ಹೊಸ ಆಯುಷ ಆಸ್ಪತ್ರೆ, ಗಂಗಿಮಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಆಶ್ರಯ ಬಡಾವಣೆ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ sಸಿ.ಬಿ.ಬಡ್ನಿ, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ ಕೆ, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಎಂ., ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಜಿಮ್ಸ ನಿರ್ದೇಶಕ ಡಾ.ಪಿ.ಎಸ್.ಭೂಸರೆಡ್ಡಿ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಿ.ಸಿ.ಕರಿಗೌಡರ, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಧಾ ಗರಗ ಉಪಸ್ಥಿತರಿದ್ದರು. 

Exit mobile version