ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ಈವರೆಗೂ ಯಾವುದೇ ಔಷಧಿಯನ್ನು ಕಂಡು ಹಿಡಿಯಲಾಗಿಲ್ಲ. ಆದರೆ ಈ ಸೋಂಕಿನಿಂದ ರಕ್ಷಣೆ ಪಡೆಯಲು ಪ್ಲಾಸ್ಮಾ ಥೆರಪಿ ಉತ್ತಮ ವಿಧಾನ ಎನ್ನಲಾಗಿದೆ. ಈ ಕಾರಣದಿಂದಾಗಿ ರಾಜ್ಯದ ಇಬ್ಬರು ಪ್ಲಾಸ್ಮಾ ದಾನ ಮಾಡಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ಪ್ಲಾಸ್ಮಾ ಥೆರಫಿ ಚಿಕಿತ್ಸೆಗಾಗಿ ಕೇಂದ್ರದ ಅನುಮತಿಯನ್ನು ಪಡೆದುಕೊಂಡಿದೆ. ಆದರೆ ಈ ಚಿಕಿತ್ಸೆಗೆ ದಾನಿಗಳ ಕೊರತೆ ಎದುರಾಗಿತ್ತು. ಇದೀಗ ರಾಜ್ಯದ ಇಬ್ಬರು ದಾನಿಗಳು ಪ್ಲಾಸ್ಮಾ ದಾನಕ್ಕೆ ಮುಂದಾಗಿದ್ದು ಇತರರಿಗೂ ಪ್ರೇರಣೆಯಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರು ಪ್ಲಾಸ್ಮಾ ಥೆರಲಿಯನ್ನು ನಡೆಸುತ್ತಿದ್ದಾರೆ. ಈ ಬಗ್ಗೆ ಪ್ಲಾಸ್ಮಾ ಡೋನೆಟ್ ಗಾಗಿ ಜನರನ್ನು ಪ್ರೇರೆಪಿಸುವ ಮೂಲಕ ಡಾ.ವಿಶಾಲ್ ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ.

ಕೊರೋನಾ ಪಾಸಿಟಿವ್ ಆಗಿದ್ದ 40 ವರ್ಷದ ವ್ಯಕ್ತಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಬೆಂಗಳೂರು ಮೂಲದ ಈ ವ್ಯಕ್ತಿ ಪ್ಲಾಸ್ಮಾ ದಾನಕ್ಕೆ ಮುಂದಾದ ಮೊದಲಿಗರಾಗಿದ್ದಾರೆ. ಕೊರೋನಾ ಸೋಂಕಿನಿಂದ ಬಳಲಿ ಇದೀಗ ಗುಣಮುಖರಾದ ಇವರಿಗೆ ಅದರ ಗಂಭೀರತೆ ಅರ್ಥವಾಗಿರುತ್ತದೆ. ಹೀಗಾಗಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಪ್ಲಾಸ್ಮಾ ಚಿಕಿತ್ಸೆ ಪರ್ಯಾಯವಾದಾಗ ಪ್ಲಾಸ್ಮಾ ದಾನಿಗಳ ಕೊರತೆ ನೀಗಿಸಲು ಮುಂದಾಗಿದ್ದಾರೆ.

ಡಾ.ವಿಶಾಲ್ ರಾವ್ ಅವರಿಂದ ಮಾಹಿತಿ ಪಡೆದ ಇಬ್ಬರು ದಾನಿಗಳು ಪ್ಲಾಸ್ಮಾ ದಾನ ಮಾಡಿದ್ದು, ಕೊರೋನಾಗೆ ಇನ್ನೂ ಯಾವುದೇ ಚಿಕಿತ್ಸೆಗಳೂ ಬಂದಿಲ್ಲ. ಚಿಂತಾಜನಕ ಸ್ಥಿತಿಯಲ್ಲಿರುವ ಜನರಿಗೆ ನನ್ನಿಂದ ಜೀವ ಉಳಿಯುತ್ತಿದೆ ಎನ್ನುವುದು ನನಗೆ ಒದಗಿದ ಅದೃಷ್ಟ. ಈಗಾಗಲೇ ಕೊರೋನಾ ಸೋಂಕಿನಿಂದ ಗುಣಮುಖರಾಗಿರುವವರು ಹೆಚ್ಚಿನ ಸಂಖ್ಯೆಯಲ್ಲಿ ಪ್ಲಾಸ್ಮಾ ದಾನ ಮಾಡಲು ಮುಂದಾಗಬೇಕು ಎಂದು ಇಬ್ಬರು ದಾನಿಗಳು ಮನವಿ ಮಾಡಿಕೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಏರುಗತಿಯಲ್ಲಿ ಸೋಂಕು: ಇಂದು 5436 ಪಾಸಿಟಿವ್, ಜಿಲ್ಲಾವಾರ ವಿವರ

ರಾಜ್ಯದಲ್ಲಿಂದು 5536 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 107001 ಕ್ಕೆ ಏರಿಕೆಯಾದಂತಾಗಿದೆ.

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ಲಾಕ್ ಡೌನ್ ವಿಸ್ತರಣೆ ಬಗ್ಗೆ ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು: ಇನ್ನು ಲಾಕ್ಡೌನ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಪರಿಸ್ಥಿತಿ ನೋಡಿಕೊಂಡು ಈ ಕುರಿತಾಗಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದರು.