ಧಾರವಾಡ : ಜಿಲ್ಲೆಯೂ ಆರೇಂಜ್ ಜೋನ್ನಮಲ್ಲಿ ಇರುವ ಕಾರಣ ಹಾಗೂ ಹುಬ್ಬಳ್ಳಿಯಲ್ಲಿ ಕಂಟೋನ್ಮೆಂಟ್ ಜೋನ್ ಇರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಹೊರತು ಪಡಿಸಿ ಜಿಲ್ಲೆಯಲ್ಲಿ ನಾಲ್ಕು ದಿನಗಳ ಕಾಲ ಲಾಕ್ ಡೌನ್ ಸಡಿಲಿಕೆ ಮಾಡಲಾಗಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಧಾರವಾಡಕ್ಕೆ ಷರತ್ತು ಬದ್ಧ ಸಡಿಲಿಕೆ ನೀಡಲಾಗಿದೆ. ಗ್ರಾಮೀಣ ಭಾಗಕ್ಕೆ ಕೂಡಾ ಸಡಿಲಿಕೆ ನೀಡಲಾಗಿದೆ. ಈಗಾಗಲೇ ಅಗತ್ಯ ಸರಕು ಸಾಗಣೆ, ಉತ್ಪಾದನೆಗೆ ಜಿಲ್ಲೆಯಲ್ಲಿ ಅವಕಾಶ ನೀಡಲಾಗಿದೆ. ಗ್ರಾಮೀಣ ಭಾಗದಲ್ಲಿ ಮುಗ್ಗಟ್ಟು ಕಾಯ್ದೆ ಅಡಿ ನೋಂದಾಯಿತ ಅಂಗಡಿಗಳಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರವಾಡ ಗ್ರಾಮೀಣ, ನವಲಗುಂದ, ಅಣ್ಣಿಗೇರಿ, ಅಳ್ನಾವರ, ಕಲಘಟಗಿ ಹಾಗೂ ಕುಂದಗೋಳ ಪಟ್ಟಣಗಳ ಅಂಗಡಿಗಳಿ ತೆರೆಯಲು ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ಧಾರವಾಡ ನಗರದಲ್ಲಿ ವಾರದಲ್ಲಿ ನಾಲ್ಕು ದಿನಗಳಾದ ಸೋಮವಾರದಿಂದ ಗುರುವಾರವರೆಗೆ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಬೆಳಿಗ್ಗೆ 10 ರಿಂದ ಸಂಜೆ 6ರ ವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಜಿಲ್ಲಾಧಿಕಾರಿಯವರು ಲಿಖಿತ ಆದೇಶ ಹೊರಡಿಸುತ್ತಾರೆ ಎಂದು ಹೇಳಿದ್ದಾರೆ.
