ದಾವಣಗೆರೆ : ಹಸಿರು ವಲಯದಲ್ಲಿ ಇದ್ದ ದಾವಣಗೆರೆ ಜಿಲ್ಲೆಗೂ ಮಹಾಮಾರಿ ವಕ್ಕರಿಸಿಕೊಂಡಿದೆ. ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ.
ಈ ಮೂಲಕ ಜಿಲ್ಲೆಯಲ್ಲಿ ಮೊದಲ ಪ್ರಕರಣ ಖಾತೆ ತೆರೆದಿದೆ. ಇವರು ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆ ನಂತರ ಅವರ ಗಂಟಲ ದ್ರವ ಹಾಗೂ ರಕ್ತದಅ ಮಾದರಿಯನ್ನು ಲ್ಯಾಬ್ ಗೆ ಕಳುಹಿಸಲಾಗಿತ್ತು. ಆದರೆ, ಅವರಲ್ಲಿ ಕೊರೊನಾ ಇರುವುದು ದೃಢಪಟ್ಟಿದೆ.
ಇವರಿಗೆ ಪತಿ ಹಾಗೂ 18 ವರ್ಷದ ಮಗ ಇದ್ದಾನೆ. ಸದ್ಯ ಇವರು ವಾಸವಿದ್ದ ಸ್ಥಳವನ್ನು ಸೀಲ್ ಡೌನ್ ಮಾಡಲಾಗಿದೆ. ಆಸ್ಪತ್ರೆಗೆ ಬಂದಿದ್ದ ರೋಗಿಗಳ ಸಂಪರ್ಕದಿಂದಲೇ ಇವರಿಗೆ ಸೋಂಕು ತಗುಲಿದೆ ಎಂದು ಸಂಶಯ ವ್ಯಕ್ತಪಡಿಸಲಾಗಿದೆ. ಸದ್ಯ ಇವರ ಜೊತೆ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕಕ್ಕೆ ಬಂದವರ ಬಗ್ಗೆ ಜಿಲ್ಲಾಡಳಿತ ಮಾಹಿತಿ ಸಂಗ್ರಹಿಸುತ್ತಿದೆ.
