ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ. ಆದಾಗ್ಯೂ ಜನರು ಮಾತ್ರ ರಸ್ತೆಗಿಳಿಯುವುದು ಸಾಮಾನ್ಯವಾಗಿದೆ. ಜನರ ವರ್ತನೆಗೆ ಬೇಸತ್ತು ಪೊಲೀಸರು ಬೀದರ್ ನಲ್ಲಿ ಅನಾವಶ್ಯಕವಾಗಿ ಓಡಾಡುತ್ತಿದ್ದವರಿಗೆ ಬಿಸಿ ಬಿಸಿ ಕಜ್ಜಾಯ ನೀಡಿದ್ದಾರೆ. ಡಿವೈಎಸ್ಪಿ ಬಸವೇಶ್ವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಯಿತು.

ಈ ಮೂಲಕ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಅನವಶ್ಯಕವಾಗಿ ರಸ್ತೆಗಿಳಿದ ವಾಹನಗಳನ್ನು

ವಶಕ್ಕೆ ಪಡೆದಿದ್ದಾರೆ. ಬೀದರ್ ನಗರದ ಅಂಬೇಡ್ಕರ್ ಸರ್ಕಲ್ ನಲ್ಲಿ ಪಾಸ್ ಇಲ್ಲದೆ ಓಡಾಡುತಿದ್ದವರಿಗೆ ಬಿಸಿ ಮುಟ್ಟಿಸಲಾಗಿದೆ.  

Leave a Reply

Your email address will not be published. Required fields are marked *

You May Also Like

ವಿಜಯಪುರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ!

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದೆ. ವಿಜಯಪುರ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ದ್ರಾಕ್ಷಿ, ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಗೀಡಾಗಿವೆ.

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ದಲಿತರ ಮೀಸಲಾತಿ ಕಸಿಯಲು ಯತ್ನಿಸುತ್ತಿದ್ದಾರೆ ; ಲಲಿತಾ

ಕುರುಬರ ಎಸ್ಟಿಷ ಮೀಸಲಾತಿಗಾಗಿ ಹೋರಾಡುತ್ತಾ ದಲಿತರ ಮೀಸಲಾತಿ ಹಕ್ಕುಗಳನ್ನು ಕಸಿಯಲು ಯತ್ನಿಸುತ್ತಿದ್ದಾರೆ ಎಂದು ಲೇಖಕಿ ಬಿ.ಟಿ.ಲಲಿತಾ ನಾಯಕ್ ಆರೋಪಿಸಿದರು.