ಮುಂಬಯಿ : ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ. ಇಲ್ಲಿಯ ಎಚ್ಎಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರಿಗ ಉಸಿರಾಟದ ತೊಂದರೆಯಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಫೆಬ್ರವರಿಯಲ್ಲಿ ರಿಷಿ ಕಪೂರ್ ಅವರನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ರಿಷಿ ಅವರು ಮೊದಲ ಬಾರಿಗೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೆಲವು ಸೋಂಕಿನಿಂದ ಬಳಲುತ್ತಿದ್ದರು. ಮುಂಬಯಿಗೆ ಮರಳಿದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಸದ್ಯ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.