ಮುಂಬಯಿ : ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ. ಇಲ್ಲಿಯ ಎಚ್ಎಎನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ಯಾನ್ಸರ್ ನಿಂದ ಬಳಲುತ್ತಿರುವ ಅವರಿಗ ಉಸಿರಾಟದ ತೊಂದರೆಯಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.
ಫೆಬ್ರವರಿಯಲ್ಲಿ ರಿಷಿ ಕಪೂರ್ ಅವರನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಾರ್ಯಕ್ರಮವೊಂದಕ್ಕೆ ಹೋಗಿದ್ದ ರಿಷಿ ಅವರು ಮೊದಲ ಬಾರಿಗೆ ದೆಹಲಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ವೇಳೆ ಕೆಲವು ಸೋಂಕಿನಿಂದ ಬಳಲುತ್ತಿದ್ದರು. ಮುಂಬಯಿಗೆ ಮರಳಿದ ಮೇಲೆ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆ ವೈರಲ್ ಫೀವರ್ ನಿಂದ ಬಳಲುತ್ತಿದ್ದಾರೆಂದು ಹೇಳಲಾಗುತ್ತಿತ್ತು. ಸದ್ಯ ಅವರನ್ನು ಮತ್ತೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಎಪಿಎಂಸಿ ಕಾಯ್ದೆ ಬದಲಾವಣೆ ಕಳ್ಳ ಸಂತೆಗೆ ಅನುಕೂಲ: ಶಾಸಕ ಎಚ್.ಕೆ.ಪಾಟೀಲ್

ಈಗಾಗಲೇ ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯಲ್ಲಿ ಬದಲಾವಣೆ ತರಲು ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷ ಹಾಗೂ ರೈತಪರ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ.

ಉಪಹಾರಕ್ಕೆ ಸೀಮಿತವಾದ ಬಜೆಟ್ ಮಂಡನೆ ಪೂರ್ವಭಾವಿ ಸಭೆ

ಉತ್ತರಪ್ರಭ ಸುದ್ದಿ ನರೆಗಲ್ಲ: ಪಟ್ಟಣ ಪಂಚಾಯತಿಯಲ್ಲಿ ಶುಕ್ರವಾರ ನಡೆಯಬೆಕಿದ್ದ ಬಜೆಟ್ ಮಂಡನೆ ಪೂರ್ವಭಾವಿ ಸಬೆಗೆ ಮುಖ್ಯಾಧಿಕಾರಿ…

ಗದಗನಲ್ಲಿ ಎಇಇ ಮನೆ ಮೇಲೆ ಎಸಿಬಿ ದಾಳಿ

ಗದಗ: ಇಲ್ಲಿನ ರಾಜೀವ್ ಗಾಂಧಿ ನಗರದಲ್ಲಿರುವ ಬಾಗಲಕೋಟೆ ಜಿಲ್ಲೆಯ ನೀರು‌ ಸರಬರಾಜು ಮಂಡಳಿಯ ಎಇಇ ಹನುಮಂತ…