ಮುಂಬಯಿ: ಅನಾರೋಗ್ಯದಿಂದ ಬಳಲುತ್ತಿದ್ದ ಬಾಲಿವುಡ್ ಹಿರಿಯ ನಟ ರಿಷಿ ಕಪೂರ್ ನಿಧನರಾಗಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ರಿಷಿ ಕಪೂರ್ (67) ಮುಂಬೈನ ಆಸ್ಪತ್ರೆಯಲ್ಲಿಂದು ನಿಧನ ಹೊಂದಿದರು. ಈ ಬಗ್ಗೆ ರಿಷಿ ಸಹೋದರ ರಣದೀರ್ ಕಪೂರ್ ಮಾಹಿತಿ ನೀಡಿದ್ದಾರೆ.

ವರ್ಷದ ಹಿಂದೆ ಯುಎಸ್‍ನಲ್ಲಿ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆದಿದ್ದ ರಿಷಿ, 7 ವರ್ಷದಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ರು. ನಿನ್ನೆ ರಿಷಿ ಅವರಿಗೆ​ ಉಸಿರಾಟದ ತೊಂದರೆ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇವರ ಸಾವಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಬಾಲಿವುಡ್ ಹಿರಿಯ ನಟ ಅಮಿತಾಭ್​ ಬಚ್ಚನ್​ ಕೂಡ ಇವರ ಸಾವಿಗೆ ಬೇಸರ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಒಳ್ಳೆಯ ಅವಕಾಶಗಳು ಸಿಕ್ಕರೆ ಕನ್ನಡದಲ್ಲಿಯೂ ನಟಿಸುವೆ – ಸಂಯುಕ್ತಾ!

ಬೆಂಗಳೂರು : ಲಾಕ್ ಡೌನ್ ಇದ್ದರೂ ಅಭಿಮಾನಿಗಳೊಂದಿಗೆ ತಮ್ಮ ಒಡನಾಟ ಇಟ್ಟುಕೊಂಡಿರುವ ನಟಿ ಸಂಯುಕ್ತಾ ಹೆಗ್ಡೆ…

ಕೊರೋನಾ: ರಾಜ್ಯದಲ್ಲಿ ಸಾವಿನ ಸಂಖ್ಯೆ 38 ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮಹಾಮಾರಿಗೆ ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ‌. ಈ ಮೂಲಕ…

ಕೊರೋನಾ ಸೋಂಕಿತರ ಸಂಖ್ಯೆ ಬಹಿರಂಗಕ್ಕೂ ಮೀನಾಮೇಷವೇ..?

ಲಾಕ್ ಡೌನ್ ಸಡಿಲಿಕೆಯಿಂದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಸೋಂಕಿತರ ಸಂಖ್ಯೆಯಿಂದಾಗಿ ಕೇಂದ್ರ ಸರ್ಕಾರ ಅಂಕಿಸಂಖ್ಯೆಯನ್ನು ಬಹಿರಂಗ ಪಡಿಸಲು ಮೀನಾಮೇಷ ಎಣಿಸುತ್ತಿದೆಯೇ? ಎಂಬ ಪ್ರಶ್ನೆ ಉದ್ಭವವಾಗಿದೆ.