ಬೆಂಗಳುರು: ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಅಂದಿನಿಂದ ಈವರೆಗೆ ಬೆಂಗಳೂರ ನಗರ ವ್ಯಾಪಿಯಲ್ಲಿ ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.

ಈಗಾಗಲೇ 44081 ಬೈಕ್, 1168 ಆಟೋ ಸೇರಿದಂತೆ ಒಟ್ಟು 47258 ವಾಹನಗಳನ್ನು ಸೀಜ್ ಮಾಡಲಾಗಿತ್ತು. ಲಾಕ್ ಡೌನ್ ಹಿನ್ನೆಲೆ ಸಾಕಷ್ಟು ಕಟ್ಟುನಿಟ್ಟಿನ ಮದ್ಯದಲ್ಲೂ ಜನರ ಓಡಾಟ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡಬೇಕಾಯಿತು. ಹೀಗಾಗಿ ಅನಿವಾರ್ಯವಾಗಿ ವಾಹನ ಸೀಜ್ ಮಾಡಬೇಕಾಗಿತ್ತು. ಹೀಗಾಗಿ ಬೆಂಗಳೂರು ನಗರದಲ್ಲೆ 47000ಕ್ಕೂ ಹೆಚ್ಚು ವಾಹನಗಳನ್ನು ಸೀಜ್ ಮಾಡಲಾಗಿದೆ.

ಈ ಕುರಿತು ಟ್ವೀಟ್ ಮಾಡಿರುವ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೀಜ್ ಮಾಡಿರುವ ವಾಹನಗಳನ್ನು ದಾಖಲೆ ಪರಿಶೀಲಿಸಿ ನಾಳೆಯಿಂದ ಮಾಲಿಕರಿಗೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ಮಾಲಿಕರಿಗೆ ವಾಹನ ಮರಳಿಸಲು ಅನುಮೋದನೆ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಬರೋಬ್ಬರಿ 11 ಗಂಟೆಗಳ ಕಾಲ ಮಾತುಕತೆ ನಡೆಸಿದ ಭಾರತ, ಚೀನಾ ಸೇನಾಧಿಕಾರಿಗಳು!

ಲಡಾಖ್: ಭಾರತ ಹಾಗೂ ಚೀನಾ ಸೇನಾಧಿಕಾರಿಗಳು ಬರೋಬ್ಬರಿ 11 ಗಂಟೆಗಳ ಕಾಲ ಗಡಿ ಸಂಘರ್ಷದ ಕುರಿತು…

ಗದಗ ಜಿಲ್ಲೆಯ ಖಾಕಿ ಖದರ್ ಗೆ ಜನರು ಖುಷ್..!: ಕಳೆದ ವಸ್ತುಗಳು ಕೈಸೇರಿದ್ದಕ್ಕೆ ಜನ್ರು ಖುಷ್ !

ಖಾಕಿ ತನ್ನ ಖದರ್ ತೋರಿಸಿದರೆ ಏನೆಲ್ಲ ಮಾಡಬಹುದು ಎನ್ನುವುದಕ್ಕೆ ಗದಗ ಜಿಲ್ಲೆಯ ಪೊಲೀಸರು ತಾಜಾ ಉದಾಹರಣೆ. ಒಂದು ವರ್ಷದಿಂದ ಜಿಲ್ಲೆಯಲ್ಲಿ ಆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳ್ಳತನ ಜಾಲ ಭೇದಿಸಿ ಕಳ್ಳರ ಹೆಡೆಮುರಿ ಕಟ್ಟಿ ಜನರು ಕಳೆದುಕೊಂಡ ವಸ್ತುಗಳನ್ನು ಮರಳಿಸುವ ಮೂಲಕ ಜಿಲ್ಲಾ ಪೊಲೀಸ್ ಇಂದು ಜನರ ಮೆಚ್ಚುಗೆಗೆ ಪಾತ್ರವಾಯಿತು.

ರಾಜ್ಯದಲ್ಲಿಂದು 141 ಕೊರೊನಾ ಪ್ರಕರಣ: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿಂದು ಮತ್ತೆ 141 ಕೊರೊನಾ ಸೊಂಕು ಪ್ರಕರಣ ಪತ್ತೆಯಾಗಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕು…

ಕಿರಿಕ್ ಬೆಡಗಿಗೆ ವಿಜಯ್ ಕಳುಹಿಸಿದ ಸಂದೇಶವೇನು?

ಬೆಂಗಳೂರು: ಕಿರಿಕ್ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ವಿಜಯ್ ದೇವರಕೊಂಡ ಸಂದೇಶ ಕಳುಹಿಸಿದ್ದಾರೆ. ಹೈದರಾಬಾದ್ಗೆ ಬಾ…