ನವದೆಹಲಿ : ಭಾರತದ ಸೈನಿಕರ ಮೇಲೆ ನಿಗಾ ಇಡುವ ನಿಟ್ಟಿನಲ್ಲಿ ಪಾಕ್ ಕುತಂತ್ರ ಬುದ್ಧಿ ಬಳಕೆ ಮಾಡಿರುವುದು ಬೆಳಕಿಗೆ ಬಂದಿದೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆಗಳು ಆರೋಗ್ಯ ಸೇತು ಆ್ಯಪ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಸೇನೆ ಎಚ್ಚರಿಸಿದೆ. ಆರೋಗ್ಯ ಸೇತು ಆ್ಯಪ್ ನಂತಹುದ್ದೇ ಮತ್ತೊಂದು ಆ್ಯಪ್ ಅನ್ನು ಸಿದ್ಧಪಡಿಸಿ ಆ ಮೂಲಕ ಭಾರತೀಯ ಸೈನಿಕರ ಮೇಲೆ ನಿಗಾ ಇಡುತ್ತಿದೆ. ಈ ಕುರಿತು ಕೇಂದ್ರ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದೆ.

ನಕಲಿ ಆರೋಗ್ಯ ಸೇತು ಆ್ಯಪ್ ಮೂಲಕ ಭಾರತೀಯ ಮಿಲಿಟರಿ ಪಡೆಯ ಫೋನ್ ಗಳನ್ನು ಹ್ಯಾಕ್ ಮಾಡಿ ಆ ಮೂಲಕ ಸೈನಿಕರ ಚಲನವಲನಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ಇದಕ್ಕಾಗಿ ಆರೋಗ್ಯ ಸೇತು. ಎಪಿಕೆ (Aarogya Setu.apk.) ನಂತಹ ನಕಲಿ ಆ್ಯಪ್ ಸೃಷ್ಟಿ ಮಾಡಿದೆ.

ಪಾಕಿಸ್ತಾನ ಮೂಲದ ಆಪರೇಟರ್ ಗಳು ಇದನ್ನು ವಾಟ್ಸಪ್ ಮೂಲಕ ಭಾರತದ ಸೇನಾಧಿಕಾರಿಗಳ ಮೊಬೈಲ್ ಗೆ ರವಾನಿಸುತ್ತಿದ್ದಾರೆ ಎಂದು ಹೇಳಿದೆ. ಇತ್ತೀಚೆಗಷ್ಟೇ ಭಾರತದ ಎಲ್ಲ ಸೈನಿಕರೂ ಆ್ಯಪ್ ಡೌನ್ಲೋಡ್ ಮಾಡಿ ಬಳಸುವಂತೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿತ್ತು. ಆದರೆ ಸರ್ಕಾರದ ಸದುದ್ದೇಶವನ್ನು ಪಾಕಿಸ್ತಾನ ತನ್ನ ನೀಚ ಕೃತ್ಯಕ್ಕೆ ದುರ್ಬಳಕೆ ಮಾಡಿಕೊಳ್ಳುತ್ತಿದೆ.

Leave a Reply

Your email address will not be published. Required fields are marked *

You May Also Like

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಮಗುವನ್ನು ಕದ್ದೋಯ್ದ ಕೋತಿಗಳು

ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.

ದಿಗ್ವಿಜಯ್ ಸಿಂಗ್ ನಕಲಿ ಟ್ವೀಟರ್ ರಚನೆ: ದೂರು ನೀಡಿದ ಕೈ ನಾಯಕ

ಭೋಪಾಲ್: ಕಾಂಗ್ರೆಸ್ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಹೆಸರಿನಲ್ಲಿ ನಕಲಿ ಟ್ವೀಟರ್…

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು