ಚೆನ್ನೈ : ತಮಿಳುನಾಡಿನಲ್ಲಿ ಮಹಾಮಾರಿ ಕೊರೊನಾ ವೈರಸ್ ತಾಂಡವಾಡುತ್ತಿದೆ. ಇಂದು ಒಂದೇ ದಿನ ಚೆನ್ನೈನಲ್ಲಿ 138 ಜನ ಸೇರಿದಂತೆ ತಮಿಳುನಾಡಿನಾದ್ಯಂತ ಒಟ್ಟು 161 ಪ್ರಕರಣಗಳು ಪತ್ತೆಯಾಗಿವೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2,323ಕ್ಕೆ ಏರಿಕೆ ಕಂಡಿದೆ.

ತಮಿಳುನಾಡಿನ ರಾಜಧಾನಿಯಲ್ಲಿ ಇಂದು ಬರೋಬ್ಬರಿ 138 ಪ್ರಕರಣಗಳು ಪತ್ತೆಯಾಗಿದ್ದು, ಇದುವರೆಗೆ
ಒಂದೇ ದಿನ ಪತ್ತೆಯಾದ ಅತಿ ಹೆಚ್ಚು ಪ್ರಕರಣಗಳಾಗಿವೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 906ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ದೇಶಾದ್ಯಂತ ಕೊರೋನಾಗೆ ಒಟ್ಟು 67 ಜನ ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 1075ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಒಟ್ಟು 1823 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 33610ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರಿಗೆ ಗುಡ್ ನ್ಯೂಸ್!

ಲಾಕ್‌ಡೌನ್‌ ತೆರವಾದ ನಂತರ, ಬಸ್ ಸಂಚಾರ ಆರಂಭಗೊಂಡಿದ್ದರೂ ಪ್ರಯಾಣಿಕರ ಸಂಖ್ಯೆ ನಿರೀಕ್ಷೆಯಂತೆ ಹೆಚ್ಚುತ್ತಿಲ್ಲ. ಅದಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಪ್ರಯಾಣಿಕರನ್ನು ಸೆಳೆಯಲು, ದೈನಂದಿನ ಹಾಗೂ ಮಾಸಿಕ ಪಾಸ್‌ಗಳನ್ನು ರಿಯಾಯಿತಿ ದರದಲ್ಲಿ ನೀಡುವ ಯೋಜನೆ ಹಮ್ಮಿಕೊಂಡಿದೆ.

ಯುದ್ಧಕ್ಕೆ ಸಿದ್ಧವಾಗಿರುವಂತೆ ಸೂಚಿಸಿದ ರಕ್ಷಣಾ ಸಚಿವ!

ನವದೆಹಲಿ: ಲಡಾಖ್ ನಲ್ಲಿ ಚೀನಾ ಸಂಘರ್ಷದ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಸಿಬ್ಬಂದಿ…

ದೇಶದ ಜನತೆಯನ್ನು ಹಾಡಿ ಹೊಗಳಿದ ಪ್ರಧಾನಿ ಮೋದಿ!

ಫೋರ್ಬೆಸ್ ಗಂಜ್ : ಬಿಹಾರ ವಿಧಾನಸಭಾ ಚುನಾವಣೆಯ ಎರಡನೇ ಹಂತದ ಮತದಾನ ಶಾಂತಿಯಿಂದ ನಡೆದಿದ್ದು, ದೇಶದ ಜನತೆಯನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.