ಮುಂಬಯಿ : ಕೇಂದ್ರ ಚುನಾವಣಾ ಆಯೋಗವು ಮೇ. 27ರ ಒಳಗೆ ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಅನುಮತಿ ನೀಡಿದ್ದು, ಸಿಎಂ ಉದ್ದವ್ ಠಾಕ್ರೆಗೆ ಸಂತಸ ತಂದಿದೆ.

ಮೇ. 27ರ ಮೊದಲು ಮಹಾರಾಷ್ಟ್ರದ ವಿಧಾನ ಪರಿಷತ್ತಿಗೆ ಚುನಾವಣೆ ನಡೆಸಲು ಒಪ್ಪಿರುವ ಆಯೋಗವು ಕೊರೊನಾ ವಿರುದ್ಧ ಸುರಕ್ಷತೆಗಾಗಿ ಅಗತ್ಯ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ಹೇಳಿದೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಹಾರಾಷ್ಟ್ರ ದಿನಾಚರಣೆ ಹಿನ್ನೆಲೆಯಲ್ಲಿ ರಾಜಭವನಕ್ಕೆ ಸೌಜನ್ಯದ ಭೇಟಿ ನೀಡಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರನ್ನು ಭೇಟಿಯಾಗಿದ್ದಾರೆ. ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.

ಏ.24 ರಂದು ತೆರವಾಗಿದ್ದ ರಾಜ್ಯದ ವಿಧಾನ ಪರಿಷತ್ ನ 9 ಸ್ಥಾನಗಳಿಗೆ ಚುನಾವಣೆ ನಡೆಸುವಂತೆ ಆಯೋಗಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಗುರುವಾರ ಮನವಿ ಮಾಡಿದ್ದರು. ಆಯೋಗವು ಚುನಾವಣೆಗೆ ಗ್ರೀನ್ ಸಿಗ್ನಲ್ ನೀಡಿದ್ದು, ಠಾಕ್ರೆ ಪಾಳಯದಲ್ಲಿ ಸಂತಸ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4 ಕ್ಕೆ ಏರಿಕೆ..!

ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4…

ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದ ಗುಲಾಬಿ ಬಣ್ಣದ ಚೂಡಿದಾರ ಧರಿಸಿದ ಯುವತಿ

ರೊಟ್ಟಿ ಮಾಡುತ್ತ ಕುಳುತಿರುವ ಯುವತಿಯೋರ್ವಳು ಈಗ ಸಾಮಾಜಿಕ ಜಾಲತಾಣದಲ್ಲಿ ಸೆಲೆಬ್ರಿಟಿಯಾಗಿ ಮಿಂಚುತ್ತಿದ್ದಾಳೆ.

ಮೀಸಲಾತಿ ಪಟ್ಟಿ: ಕಾರಜೋಳ ಹೇಳಿಕೆ ಸ್ವಾಗತಿಸಿದ ಇಮ್ಮಡಿ ಶ್ರೀ

ಚಿತ್ರದುರ್ಗ: ಭೋವಿ, ಲಂಬಾಣಿ, ಕೊರಮ, ಕೊರಚ ಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಟ್ಟಿಲ್ಲ ಹಾಗೂ ಬಿಡುವುದಿಲ್ಲ…