ಬೆಂಗಳೂರು : ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.
ಕೊರೊನಾ ಗಂಡಾಂತರಕಾರಿ ಸಂದರ್ಭದಲ್ಲಿ ಕಾರ್ಮಿಕ ಬಂಧುಗಳ ಮೊಗದಲ್ಲಿ ನಗೆ ಮಾಸಿರುವುದು ವಾಸ್ತವ ಸತ್ಯ. ಕಂಡರಿಯದ ಈ ವಿಪತ್ತಿನ ಕಾಲವನ್ನು ಗೆದ್ದು ಬರುವ ದೃಢ ಸಂಕಲ್ಪ ಕಾರ್ಮಿಕರಲ್ಲಿ ಮನೆ ಮಾಡಲಿ ಎಂದು ಅವರು ಟ್ವೀಟ್ ಮೂಲಕ ಹಾರೈಸಿದ್ದಾರೆ.
ಸೋತಿರುವ ದುಡಿಯುವ ಕೈಗಳಿಗೆ ಹೊಸ ಚೈತನ್ಯ ಬರಲಿ. ಒಳ್ಳೆಯ ದಿನಗಳ ನಿರೀಕ್ಷೆಯಲ್ಲಿ ಈ ಬಾರಿಯ ಕಾರ್ಮಿಕ ದಿನಾಚರಣೆ ಎದುರುಗೊಳ್ಳೋಣ. ಕಾರ್ಮಿಕರ ಭವಿಷ್ಯದ ಆತಂಕ ದೂರವಾಗಲಿ. ಎಲ್ಲರಿಗೂ ಕಾರ್ಮಿಕ ದಿನಾಚರಣೆಯ ಶುಭಾಶಯಗಳು ಎಂದಿದ್ದಾರೆ.