ಬೆಂಗಳೂರು : ಸದ್ಯ ಮದ್ಯ ಮಾರಾಟ ಮಾಡುವುದಿಲ್ಲ ಎಂಬ ಸುಳಿವನ್ನು ಸಚಿವ ಆರ್. ಅಶೋಕ್ ಹೇಳಿದ್ದಾರೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರದ ಇಂದು ಸಿಎಂ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯ ನಂತರ ಸಚಿವ ಆರ್. ಅಶೋಕ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಮೇ..4 ರ ನಂತರವೇ ಸರ್ಕಾರ ಮದ್ಯ ಮಾರಾಟದ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ. ಎಷ್ಟು ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು ತೆರೆಯಬಹುದು ಎಂಬ ಕುರಿತು ನಿರ್ಧಾರ ತೆಗೆದುಕೊಳ್ಳುವುದನ್ನು ಸಿಎಂ ಅವರ ವಿವೇಚನೆಗೆ ಬಿಟ್ಟಿದ್ದೇವೆ ಎಂದು ಹೇಳಿದ್ದಾರೆ.
