ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ಸೂರಿಲ್ಲದೆ ಬೀದಿಗೆ ಬಂದ ಬದುಕು : ಪರಿಹಾರದ ನೀರಿಕ್ಷೆಯಲ್ಲಿ ಬಡ ಕುಟುಂಬ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಬಸ್ತಿಕೆರೆಯ ಓಣಿಯ ನಿವಾಸಿ ಬಸವರಾಜ ನಿಂಗಪ್ಪ ಮಡಿವಾಳರ ಎಂಬ ವ್ಯಕ್ತಿಗೆ…

ಇಂದು ಕೊರೋನಾ ಸೋಂಕಿತರ ಸಂಖ್ಯೆ ಶತಕ..! ಯಾವ ಜಿಲ್ಲೆಯಲ್ಲಿ ಎಷ್ಟು ಸೋಂಕಿತರು?

ಇಂದು ಕೂಡ ರಾಜ್ಯಾದ್ಯಂತ ಕೊರೋನಾ ಮಹಾಮಾರಿ ಅಟ್ಟಹಾಸ ಮೆರೆದಿದೆ. ಈ ಮೂಲಕ ರಾಜ್ಯದಲ್ಲಿ ಇಂದು 100 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ.

ಕೊರೊನಾ ಸಮಯದಲ್ಲಿ ನಿಮ್ಮ ತಲೆನೋವಿನ ಸಮಸ್ಯೆಯನ್ನು ಹಗುರವಾಗಿ ಪರಿಗಣಿಸಬೇಡಿ! (ಉತ್ತರ ಪ್ರಭ ವಿಶೇಷ)

ಬೆಂಗಳೂರು : ಜಗತ್ತಿನಾದ್ಯಂತ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದು ತೊಡ್ಡ ಆತಂಕಕ್ಕೆ ಕಾರಣವಾಗುತ್ತಿದೆ. ಅಷ್ಟೇ ಅಲ್ಲದೇ, ದಿನದಿಂದ ದಿನಕ್ಕೆ ಸೋಂಕಿನ ಲಕ್ಷಣಗಳು ಕೂಡ ಬದಲಾಗುತ್ತಿವೆ.

ನಾನು ಎಸ್ಕಾರ್ಟ್ ನಲ್ಲಿ ಓಡಾಡುವುದು ಕೆಲವರಿಗೆ ಬೇಸರ ತಂದಿರಬಹುದು: ಸಚಿವ ಡಾ. ನಾರಾಯಣಗೌಡ

ನಾನು ತಳಮಟ್ಟದಿಂದ ಬಂದವನು. ಯಾರ ಬಗ್ಗೆಯೂ ಲಘುವಾಗಿ ಮಾತಾಡಲ್ಲ. ನಾಗಮಂಗಲ ಶಾಸಕ ಸುರೇಶ್ ಗೌಡ ಅವರ ಬಗ್ಗೆ ನಾನು ಸಿಡಿ ವಿಚಾರ ಏನು ಹೇಳಿಲ್ಲ. ಅವರು ಏಕೆ ಹಾಗೆ ಮಾತಾಡಿದ್ರೊ ನನಗೆ ಗೊತ್ತಿಲ್ಲ.