ಬೆಂಗಳೂರು : ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಲಾಕ್ ಡೌನ್ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾಂದ ನಡೆಸಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿಗಳಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸಲು ಸೂಚಿಸಲಾಗಿದೆ. ಕಂಟೇನ್ಮೆಂಟ್‌ ವಲಯಗಳನ್ನು ಹೊರತುಪಡಿಸಿ ಇತರ ಕಡೆಗಳಲ್ಲಿ ಕೇಂದ್ರ ಸರ್ಕಾರ ಅನುಮತಿ ನೀಡಿರುವ ಚಟುವಟಿಕೆಗಳನ್ನು ಪ್ರಾರಂಭಿಸಲು ತಿಳಿಸಲಾಗಿದೆ.
ಸ್ವಂತ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಸಾರಿಗೆ ಬಸ್ ಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ ಮಾಡಲು ಸೂಚಿಸಲಾಗಿದೆ.
ಬೇರೆ ಊರಿನಲ್ಲಿ ಸಿಲುಕಿಕೊಂಡಿರುವವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ತೀರ್ಮಾನಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮವಹಿಸಲು ಸೂಚಿಸಿದ್ದಾರೆ.
Leave a Reply

Your email address will not be published. Required fields are marked *

You May Also Like

ಕೊರೋನಾ ಸೋಂಕು ತಪಾಸಣೆಗೆ ಒಳಪಡುವವರು ಬೇರೆಯವರ ಮೊಬೈಲ್ ನಮೂದಿಸಬೇಡಿ: ಸುಧಾಕರ್

ಕೊರೋನಾ ಸೋಂಕು ತಪಾಸಣೆಗೆ ಒಳಪಡುವ ಸಾರ್ವಜನಿಕರು ತಾವು ಬಳಸುವ ತಮ್ಮದೇ ಮೊಬೈಲ್ ಸಂಖ್ಯೆಯನ್ನು ಅಧಿಕೃತ ನಮೂನೆಯಲ್ಲಿ ದಾಖಲಿಸುವಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾಕ್ಟರ್ ಕೆ.ಸುಧಾಕರ್ ಮನವಿ ಮಾಡಿದ್ದಾರೆ .

ಸುರಕ್ಷಿತ ಅಂತರ ಕಾಯ್ದುಕೊಳ್ಳದೆ ಜನ್ಮದಿನಾಚರಣೆ ಮಾಡಿದ ಸರ್ಕಾರಿ ಅಧಿಕಾರಿ

ಬಾಗಲಕೋಟೆ: ಜಮಖಂಡಿ ತಾಲ್ಲೂಕಿನ ಸಾವಳಗಿಯಲ್ಲಿ ಕೋವಿಡ್-೧೯ ಸಂದರ್ಭದಲ್ಲಿ ಸರಕಾರಿ ಆದೇಶ ಪ್ರಕಾರ ಜನ ಸಾಮಾನ್ಯರಾಗಲಿ ಹಾಗೂ…

ಮೋಟಾರ್ ರಿವೈಂಡಿಗ್ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ವರದಿ: ವಿಠಲ ಕೆಳೂತ್ ಮಸ್ಕಿ: ದೇವನಾಂಪ್ರಿಯ ಅಶೋಕ ಮೋಟಾರ ರಿವೈಂಡಿಗ್ ಕಾರ್ಮಿಕ ಸಂಘದ ನೂತನ ಪದಾಧಿಕಾರಿಗಳ…