ಬೆಂಗಳೂರು : ಸತತವಾಗಿ ಮುಂದುವರೆದ ಲಾಕ್ ಡೌನ್ ನಿಂದಾಗಿ ರಾಜ್ಯದ ಬೊಕ್ಕಸ ಬರಿದಾಗಿದೆ. ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ರಾಜ್ಯದ ಇನ್ನುಳಿದ ಪ್ರದೇಶಗಳಲ್ಲಿ ಆರ್ಥಿಕ ಚಟುವಟಿಕೆಗಳನ್ನು ತಕ್ಷಣ ಪುನರಾರಂಭಿಸಬೇಕು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಇಂದು ತಮ್ಮ ಕಚೇರಿಯಿಂದಲೇ ವಿಡಿಯೋ ಕಾನ್ಫರೆನ್ಸ್ ನಡೆಸಿದ ಸಿಎಂ, ಎಲ್ಲ 30 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ರೆಡ್ ಜೋನ್ ಗಳನ್ನು ಹೊರತುಪಡಿಸಿ ಕೂಡಲೇ ಕೈಗಾರಿಕೆಗಳನ್ನು ಆರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ನೆಲೆಸಿರುವ ಒಡಿಶಾ ರಾಜ್ಯದ ವಲಸೆ ಕಾರ್ಮಿಕರನ್ನು ಕಳುಹಿಸುವ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಹಾಗೂ ಒಡಿಶಾ ಸಿಎಂ ನವೀನ್ ಪಟ್ನಾಯಕ್ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಪತ್ನಿ ಕೊಂದ ಸೈಕೋ ಪತಿ..!!

ಬೆಂಗಳೂರು: ಪತ್ನಿಯನ್ನು ಕೊಂದು ಎರಡು ದಿನಗಳ ಕಾಲ ಹೆಣವನ್ನು ಮನೆಯಲ್ಲಿಯೇ ಇಟ್ಟುಕೊಂಡು, ಆ ನಂತರ ಪತಿ…

ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ಬೆಂಗಳೂರು: ರಾಜ್ಯದಲ್ಲಿಂದು 204 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 7734ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 348. ಈ ಮೂಲಕ ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 4804 ಕೇಸ್ ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2824 ಸಕ್ರೀಯ ಪ್ರಕರಣಗಳಿವೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ: ಡಾ. ಕೆ. ಸುಧಾಕರ್

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಆದರೆ, ಸೋಂಕಿತರು ಹೆಚ್ಚಿನ…

ಜುಲೈನಲ್ಲಿ ಪಿಯುಸಿ ಹಾಗೂ ಆಗಸ್ಟ್‌ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿಕ್ಷಣ ಸಚಿವ ಸುರೇಶ್ ಕುಮಾರ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಸದ್ಯ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಿದೆ. ಜುಲೈನಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಹಾಗೂ…