ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Leave a Reply

Your email address will not be published. Required fields are marked *

You May Also Like

ರಾಜ್ಯ ಸರ್ಕಾರ ವಿರುದ್ಧ ಕನಕಶ್ರೀ ಆಕ್ರೋಶ

ಸಾರಾಯಿ ಮಾರಾಟ ಮತ್ತೆ ಪ್ರಾರಂಭಿಸಿರುವ ಕಾರನ ರಾಜ್ಯ ಸರ್ಕಾರದ ವಿರುದ್ಧ ಕನಕ ಶ್ರೀಗಳು ಕಿಡಿಕಾರಿದ್ದಾರೆ.

ಪೊಲೀಸ್ ಇಲಾಖೆಗೆ ಸೇರಿದ ಜಾಗವನ್ನೇ ಅತಿಕ್ರಮಣ ಮಾಡಿದ ಜನರು!

ಧಾರವಾಡ : ಜಿಲ್ಲೆಯಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಜಾಗಗಳನ್ನು ವಶಕ್ಕೆ ಪಡೆಯಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ…

ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾದ ನಾಲ್ವರು

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಈರಣ್ಣ ಕಡಾಡಿ,…