ರೈತರು ಬೆಳೆಗೆ ಬೆಳೆ ಮಾರಾಟಕ್ಕೆ ಡಿಕೆಶಿ ಮನವಿ

ಬೆಂಗಳೂರು : ಕೊರೊನಾ ವೈರಸ್ ಹರಡುವ ಭೀತಿಯಿಂದಾಗಿ ಸದ್ಯ ಮೇ. 17ರ ವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದ್ದು , ರೈತರು ತಾವು ಬೆಳೆದ ಉತ್ಪನ್ನಗಳನ್ನು ಮಾರಾಟ ಮಾಡಲು ಪರದಾಡುತ್ತಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಧ್ಯರಾತ್ರಿ ರೈತರ ಸಮಸ್ಯೆ ಆಲಿಸಿದ್ದಲ್ಲದೇ, ಸಿಎಂ ಬಿ.ಎಸ್ ಯಡಿಯೂರಪ್ಪ ಬಳಿ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಹೊರವಲಯದ ಹೊಸಕೋಟೆ, ಕೋಲಾರ, ಮಾಲೂರು, ಚಿಂತಾಮಣಿ, ಚಿಕ್ಕಬಳ್ಳಾಪುರ ಹಾಗೂ ದೇವನಹಳ್ಳಿ ಮತ್ತಿತರ ಭಾಗಗಳ ರೈತರು ತಾವು ಬೆಳೆದ ತರಕಾರಿ, ಹಣ್ಣು, ಹೂವು ಉತ್ಪನ್ನಗಳನ್ನು ತಂದು ಮಾರಾಟ ಮಾಡಲು ಅಧಿಕಾರಿಗಳು ಅವಕಾಶ ನೀಡುತ್ತಿಲ್ಲ. ಅಲ್ಲದೆ ಅವರ ವಾಹನಗಳನ್ನು ತಡೆದು ತೊಂದರೆ ಕೊಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸ್ವತಃ ಮಧ್ಯರಾತ್ರಿ ಬೆಂಗಳೂರಿನ ಕೆ.ಆರ್. ಪುರ ಮಾರುಕಟ್ಟೆ ಸಮೀಪ ಆಗಮಿಸಿದ ಶಿವಕುಮಾರ್, ರೈತರ ಸಮಸ್ಯೆ ಆಲಿಸಿದ್ದಾರೆ. ಅವರಿಗೆ ನೆರವಾಗುವಂತೆ ಸಿಎಂಗೆ ಮನವಿ ಮಾಡಿದ್ದಾರೆ.
Exit mobile version