ನವದೆಹಲಿ : ದೇಶದಲ್ಲಿ ಒಂದೆಡೆ ಲಾಕ್ ಡೌನ್ ಸಡಿಲಿಕೆ ಮಾಡಲು ಸಿದ್ಧತೆಗಳು ನಡೆದಿವೆ. ಇನ್ನೊಂದೆಡೆ ಕೊರೊನಾ ಸೋಂಕು ದಾಖಲೆ ಪ್ರಮಾಣದಲ್ಲಿ ಪತ್ತೆಯಾಗುತ್ತಿವೆ.
ಮಹಾರಾಷ್ಟ್ರ ಒಂದೇ ರಾಜ್ಯದಲ್ಲಿ ಒಂದೇ ದಿನ 1008 ಜನರಲ್ಲಿ ವೈರಸ್ ಪತ್ತೆಯಾಗಿದೆ. ಈ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಪ್ರತೀನಿತ್ಯ ಏರಿಕೆಯಾಗುತ್ತಲೇ ಇದ್ದು, ಇದೀಗ ಆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,506ಕ್ಕೆ ಏರಿಕೆಯಾಗಿದೆ. ಒಂದೇ ದಿನ 26 ಜ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ 485ಕ್ಕೆ ಏರಿಕೆಯಾಗಿದೆ.
ಈ ನಡುವೆ ನಿನ್ನೆ 106 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದರಂತೆ ಒಟ್ಟು ಗುಣಮುಖರಾಗಿರುವವರ ಸಂಖ್ಯೆ 1,879ಕ್ಕೆ ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಒಂದು ವರ್ಷದವರೆಗೆ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ: ಉಲ್ಲಂಘನೆಗೆ 10 ಸಾವಿರ ದಂಡ

ತಿರುವನಂತಪುರ: ಇನ್ನೂ ಒಂದು ವರ್ಷ ಕಾಲ ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರ ನಿಯಮ…

ಮಹದಾಯಿ ವಿಚಾರ: 4 ವಾರಗಳಲ್ಲಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಆದೇಶ!

ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ, ಮಲಪ್ರಭಾ ನದಿಗೆ ನೀರು ತಿರುಗಿಸುತ್ತಿದೆ ಎಂದು ಗೋವಾ ರಾಜ್ಯ ನ್ಯಾಯಾಂಗ ನಿಂದನೆ ದೂರು ಸಲ್ಲಿಸಿತ್ತು. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಗೋವಾ ಮನವಿ ಪರಿಶೀಲಿಸಿ ಇದಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಪರಿಶೀಲನೆ ನಡೆಸಲು ನಾಲ್ಕು ವಾರಗಳಲ್ಲಿ ತಜ್ಞರನ್ನೊಳಗೊಂಡ ಮೇಲುಸ್ತುವಾರಿ ಸಮಿತಿ ರಚಿಸಿ ವರದಿ ನೀಡಲು ಸುಪ್ರೀಂ ಕೋರ್ಟ್ ಆದೇಶಿಸಿದೆ.

ಹೀಗೆ ಮುಂದುವರೆದರೆ ಸೋಂಕಿತರ ಸಂಖ್ಯೆ ಆಗಷ್ಟ್ ನಲ್ಲಿ ಎಷ್ಟಾಗಲಿದೆ ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದು ಹೀಗೆ ಮುಂದುವರೆದರೆ ಆಗಸ್ಟ್ 15ರ ವೇಳೆಗೆ ಸೋಂಕಿತರ ಸಂಖ್ಯೆ 25 ಸಾವಿರಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಕೋವಿಡ್-19 ವಾರ್ ರೂಂ ಮುಖ್ಯಸ್ಥ ಮುನೀಶ್ ಮೌದ್ಗಿಲ್ ಅಂದಾಜಿಸಿದ್ದಾರೆ.

ಸೇಡಿನ ಕೊಲೆಗಳಲ್ಲಿ ದೇಶದಲ್ಲಿಯೇ ಬೆಂಗಳೂರು ಮೊದಲ ಸ್ಥಾನದಲ್ಲಿ!

ಬೆಂಗಳೂರು : ದೇಶದಲ್ಲಿ ದ್ವೇಷದಿಂದ ಕೊಲೆಗಳು ಹೆಚ್ಚಾಗುತ್ತಿದ್ದು, ಆತಂಕ ಮನೆ ಮಾಡುತ್ತಿದೆ. ಹೀಗೆ ಸೇಡಿನ ಕೊಲೆಗಳು ನಡೆದಿರುವ ಪಟ್ಟಿಯಲ್ಲಿ ಬೆಂಗಳೂರು ಮೊದಲ ಸ್ಥಾನದಲ್ಲಿ ಬಂದು ನಿಂತಿದೆ.