ಪಾಲ್ಘರ್ : ಪಾಲ್ಘರ್ ನಲ್ಲಿನ ಇಬ್ಬರು ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 115 ಜನರ ಪೈಕಿ ಓರ್ವ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಸಾಧುಗಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಜನ ಅಪ್ರಾಪ್ತರು ಸೇರಿದಂತೆ 115 ಜನರನ್ನು ಬಂಧಿಸಲಾಗಿದೆ. ಆದರೆ, ಈ ಪೈಕಿ ಓರ್ವ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. ಪ್ರಸ್ತುತ ಸೋಂಕು ಪತ್ತೆಯಾಗಿರುವ ವ್ಯಕ್ತಿಯನ್ನು ಪೊಲೀಸ್ ಠಾಣೆಯಲ್ಲಿ 20 ಜನರೊಂದಿಗೆ ಇರಿಸಲಾಗಿತ್ತು. ಸೋಂಕಿತ ವ್ಯಕ್ತಿಯನ್ನು ಪಾಲ್ಘರ್ ನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಜೊತೆಗಿದ್ದ 20 ಜನರನ್ನೂ ಹಾಗೂ 23 ಜನ ಪೊಲೀಸರನ್ನೂ ಕ್ವಾರಂಟೈನ್ ನಲ್ಲಿರಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಈ ನಡುವೆ ಸೋಂಕಿತ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನು ಪೊಲೀಸರು ಹುಡುಕಲು ಆರಂಭಿಸಿದ್ದಾರೆ. ಅಲ್ಲದೆ. ವ್ಯಕ್ತಿಗೆ ಸೋಂಕು ಹೇಗೆ ತಗುಲಿತು ಎಂಬುದರ ಕುರಿತಂತೆಯೂ ಅಲ್ಲಿನ ಆರೋಗ್ಯ ಇಲಾಖೆ ಪತ್ತೆ ಹಚ್ಚಲು ಕಾರ್ಯ ಆರಂಭಿಸಿದೆ.

Leave a Reply

Your email address will not be published. Required fields are marked *

You May Also Like

ಎಸ್ಎಸ್ಎಲ್ಸಿ ಪರೀಕ್ಷೆ ಬಗ್ಗೆ ಸಭೆಯಲ್ಲಿ ತೀರ್ಮಾನ: ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್

ಬೆಂಗಳೂರು: ಎಸ್ಎಸ್ಎಲ್ಸಿ ಪರಿಕ್ಷೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಸೋಮವಾರ ಸಭೆ ಸೇರುತ್ತಿದ್ದೇವೆ ಎಂದು ಪ್ರಾಥಮಿಕ ಮತ್ತು…

ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಪತ್ನಿಯಿಂದಲೇ ಪತಿಯ ಬರ್ಬರ ಹತ್ಯೆ..!

ಉತ್ತರಪ್ರಭ ಸುದ್ದಿ ಗದಗ: ಜಿಲ್ಲೆಯ ಲಕ್ಷೇಶ್ವರ ತಾಲೂಕಿನ ಸುವರ್ಣಗಿರಿ ತಾಂಡಾದಲ್ಲಿ ಪತ್ನಿಯಿಂದಲೇ ಪತಿಯ ಹತ್ಯೆಯಾದ ಘಟನೆ…

ಸಂವಿಧಾನಕ್ಕೆ ತೆಲೆ ಬಾಗಿ ನಡೆದರೆ ಬದುಕು ಪಾವನ ಮಕ್ಕಳು ಶೈಕ್ಷಣಿಕ ಪ್ರಭಲತೆ ಸಾಧಿಸಬೇಕು – ಜಿ.ಎಂ.ಕೋಟ್ಯಾಳ

ಆಲಮಟ್ಟಿ : ಸರಕಾರ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಹಾಗು ಮಕ್ಕಳ ಕಲಿಕೆಯ ಪ್ರಗತಿಗಾಗಿ ನಾನಾ ಬಗೆಯ…