ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯಾಗುತ್ತಿದೆ. ಈ ಮಧ್ಯೆ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ದಾಖಲೆಯ ಸೋಂಕಿತರು ಸಿಗುತ್ತಿದ್ದಾರೆ.

ಇಲ್ಲಿಯವರೆಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 39,980ಕ್ಕೆ ಏರಿಕೆ ಕಂಡಿದೆ. ಈ ಮಹಾಮಾರಿಗೆ 1,301 ಜನ ಬಲಿಯಾಗಿದ್ದಾರೆ. ಶನಿವಾರ ಒಂದೇ ದಿನ ದೇಶದಲ್ಲಿ 2067 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಂದೇ ದಿನ 71 ಜನರು ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ದೇಶದಲ್ಲಿ 10,017 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ.

ಇಲ್ಲಿಯವರೆಗೂ ದೇಶದಲ್ಲಿ 10 ಲಕ್ಷ ಜನರನ್ನು ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯದಲ್ಲಿಯೇ ಅತೀ ಹೆಚ್ಚು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮಹಾರಾಷ್ಟ್ರದಲ್ಲಿ ಶನಿವಾರ ಒಂದೇ ದಿನ 790 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸೋಂಕಿತರ ಸಂಖ್ಯೆ 12,296ಕ್ಕೆ ತಲುಪಿದೆ. ಜೊತೆಗೆ ರಾಜ್ಯದಲ್ಲಿ 36 ಜನ ಸಾವನ್ನಪ್ಪಿದ್ದು, ಒಟ್ಟಾರೆ ಸಾವಿನ ಸಂಖ್ಯೆ 521ಕ್ಕೆ ತಲುಪಿದೆ.

ಗುಜರಾತ್ ನಲ್ಲಿ 353 ಹೊಸ ಪ್ರಕರಣಗಳು ದಾಖಲಾಗಿವೆ. ಸೋಂಕಿತರ ಸಂಖ್ಯೆ 5054ಕ್ಕೆ ಏರಿಕೆ ಕಂಡಿದೆ. ಒಂದೇ ದಿನ 26 ಜನ ಸಾವನ್ನಪ್ಪುವುದರೊಂದಿಗೆ ಸಾವಿನ ಸಂಖ್ಯೆ 262ಕ್ಕೆ ತಲುಪಿದೆ. ತಮಿಳುನಾಡಿನಲ್ಲಿ ಶನಿವಾರ 231 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

Leave a Reply

Your email address will not be published. Required fields are marked *

You May Also Like

ಆಮ್ಲಜನಕ ಟ್ಯಾಂಕ್ ಸೋರಿಕೆ : 11 ಸಾವು

ಮಹರಾಷ್ಟçದ ನಾಸಿಕ್‌ನಲ್ಲಿ ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಮ್ಲಜನಕ ಟ್ಯಾಂಕ್ ಸೋರಿಕೆಯಿಂದ 11 ಜನ ಸಾವನ್ನಪ್ಪಿದ್ದಾರೆ.

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…

ರಾಯಚೂರು ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್!

ರಾಯಚೂರು: ಜಿಲ್ಲೆಯಲ್ಲಿಂದು 3 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 434…

ಜೂನ್ 30ರವರೆಗೆ ಲಾಕ್ ಡೌನ್ ವಿಸ್ತರಣೆ

ಜೂನ್ 30ರವರೆಗೆ ಲಾಕ್ ಡೌನ್ ಮುಂದುವರೆಸಿ ಸರ್ಕಾರ ಆದೇಶಿಸಿದೆ. ಮುಂದುವರೆದ ಲಾಕ್ ಡೌನ್ ನಲ್ಲಿ ಏನೆಲ್ಲ ಆರಂಭವಾಗಲಿವೆ ಎನ್ನುವುದನ್ನು ಈ ಕೆಳಗೆ ನೀಡಲಾಗಿದೆ.