ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ. ಭಾನುವಾರ ಒಂದೇ ದಿನ 98 ಜನರು ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಮೃತಪಟ್ಟವರ ಸಂಖ್ಯೆ 1,306ಕ್ಕೆ ಏರಿಕೆಯಾಗಿದೆ. ಇನ್ನು ಒಟ್ಟು ಸೋಂಕಿತರ ಪೈಕಿ ಈ ವರೆಗೂ 11,204 ಜನ ಗುಣಮುಖರಾಗಿದ್ದಾರೆ.

ದೇಶದಲ್ಲಿ ಅತೀ ಹೆಚ್ಚು ಸೋಂಕಿತರನ್ನು ಒಳಗೊಂಡ ಮಹಾರಾಷ್ಟ್ರದಲ್ಲಿ ಮತ್ತೆ 678 ಪ್ರಕರಣಗಳು 24 ಗಂಟೆಗಳಲ್ಲಿ ದಾಖಲಾಗಿವೆ. ಇಲ್ಲಿ ಕೊರೋನಾ ಪೀಡಿತರ ಸಂಖ್ಯೆ 12,974 ಆಗಿದ್ದು, ಬಲಿಯಾದವರ ಸಂಖ್ಯೆ 548ಕ್ಕೆ ಏರಿಕೆ ಕಂಡಿದೆ. ದೆಹಲಿಯಲ್ಲಿ ಭಾನುವಾರ 427, ಗುಜರಾತ್ ನಲ್ಲಿ 974, ತಮಿಳುನಾಡಿನಲ್ಲಿ 266 ಹೊಸ ಪ್ರಕರಣಗಳು ಪತ್ತೆಯಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.

ಬಿಹಾರ ಸಮರ – ಪ್ರಣಾಳಿಕೆ ಬಿಡುಗಡೆ ಮಾಡಿದ ಬಿಜೆಪಿ!

ಪಾಟ್ನಾ : ಬಿಹಾರ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯು ತನ್ನ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಎಲ್ಲರಿಗೂ ಉಚಿತ ವೈರಸ್ ಲಸಿಕೆ ನೀಡುವ ಭರವಸೆ ನೀಡಿದೆ.

ಗದಗ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆಯ ಅಂಧಾ ದರ್ಬಾರ್…!

ಜಿಲ್ಲೆಯ ಜೀವನಾಡಿಯಾಗಿರುವ ತುಂಗಭದ್ರೆ ಮರಳು ಗಣಿಗಾರಿಕೆಗೆ ಸಿಲುಕಿ ನರಳುವಂತಾಗಿದೆ. ನಿತ್ಯ ಲೆಕ್ಕವಿಲ್ಲದಷ್ಟು ತುಂಗಭದ್ರೆಯ ಒಡಲು ಬಗೆಯುತ್ತಿದ್ದರೂ ತುಂಗವ್ವಾ ಮರಳು ಗಣಿಗಳ್ಳರ ದಾಯಕ್ಕೆ ಅಸಹಾಯಕಳಾಗಿ ಮೈಯೊಡ್ಡಿದ್ದಾಳೆ.

ನಿನ್ನೆ ಒಂದೇ ದಿನ ದಾಖಲೆಯ ಸೋಂಕಿತರು

ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸ್ಫೋಟವಾಗುತ್ತಿದೆ. ಒಂದೇ ದಿನ ದಾಖಲೆಯ ಸೋಂಕಿತರು ಪತ್ತೆಯಾಗುತ್ತಿದ್ದಾರೆ.…