ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಸಿಲುಕಿಕೊಂಡಿದ್ದ ವಲಸಿಗರ ರೈಲ್ವೆ ಪ್ರಯಾಣದ ವೆಚ್ಚವನ್ನು ಕಾಂಗ್ರೆಸ್ ಭರಿಸಲಿದೆ ಎಂದು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಹೇಳಿದ್ದಾರೆ.

ಈ ಕುರಿತು ಎಲ್ಲ ರಾಜ್ಯಗಳ ಪ್ರದೇಶ ಕಾಂಗ್ರೆಸ್ ಸಮಿತಿಗೆ ಆದೇಶ ಹೊರಡಿಸಿರುವ ಅವರು, ಅಗತ್ಯ ವಲಸೆ ಕಾರ್ಮಿಕರಿಗೆ ಅವರವರ ಊರುಗಳಿಗೆ ಹೋಗಲು ರೈಲ್ವೆ ಪ್ರಯಾಣದ ವೆಚ್ಚ ಭರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಬಡವರಿಗೆ ಕಾಂಗ್ರೆಸ್ ನ ವಿನಮ್ರ ಕೊಡುಗೆ ಇದು. ಲಾಕ್ ಡೌನ್ ನಿಂದಾಗಿ ಲಕ್ಷಾಂತರ ಬಡವರು ತಾವು ದುಡಿಯುತ್ತಿದ್ದ ಸ್ಥಳದಲ್ಲಿಯೇ ಸಿಲುಕಿಕೊಂಡಿದ್ದಾರೆ. ಅಲ್ಲದೇ, ಅವರಿಗೆ ಕೆಲಸವೂ ಇಲ್ಲದ ಕಾರಣ ಕೈಯಲ್ಲಿ ಹಣವಿಲ್ಲ. ಈ ಕಾರಣಕ್ಕೆ ಅವರ ಸಹಾಯಕ್ಕೆ ಕಾಂಗ್ರೆಸ್ ಮುಂದೆ ಬಂದಿದೆ ಎಂದು ಹೇಳಿದ್ದಾರೆ.

ವಿದೇಶಗಳಲ್ಲಿ ಸಿಲುಕಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರಲು ಆಸಕ್ತಿ ತೋರಿಸುವ ನಮ್ಮ ಸರ್ಕಾರ, ಬಡ, ನಿರ್ಗತಿಕ ವಲಸೆ ಕಾರ್ಮಿಕರ ಬಗ್ಗೆ ಖಾಳಜಿ ತೋರಿಸುತ್ತಿಲ್ಲ ಎಂದು ಸೋನಿಯಾ ಗಾಂಧಿ ಕಿಡಿಕಾರಿದ್ದಾರೆ.

1 comment
  1. Hatsp to congress party up comming to the one step keep it up for public at large

Leave a Reply

Your email address will not be published. Required fields are marked *

You May Also Like

ಪಾಸ್ ಬುಕ್ ಮೇಲಿದ್ದ ಕನ್ನಡ ಮಾಯವಾಗಿದ್ದೇಕೆ?

ಬೆಂಗಳೂರು: ಇಲ್ಲಿನ ಚಾಮರಾಜ ನಗರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.ಈ ಹಿಂದೆ…

ಮುಳಗುಂದ ಅರ್ಬನ್ ಬ್ಯಾಂಕ ಚುನಾವಣೆ 7 ನಾಮಪತ್ರ ಸಲ್ಲಿಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ…