ದೆಹಲಿ: ಕೊರೋನಾ ಸೋಂಕು ನಿಯಂತ್ರಣದ ದೃಷ್ಟಿಯಿಂದ ಕಳೆದ ಒಂದುವರೆ ತಿಂಗಳ ಹಿಂದೆಯೇ ಲಾಕ್ ಡೌನ್ ಘೋಷಿಸಲಾಗಿತ್ತು. ಈ ಕಾರಣದಿಂದ ಬಹುತೇಕ ಚಟುವಟಿಕೆಗಳ ಜೊತೆಗೆ ಶೈಕ್ಷಣಿಕ ಚಟುವಟಿಕೆಗಳನ್ನು ಕೂಡ ನಿಲ್ಲಿಸಲಾಗಿತ್ತು. ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಲಾಗಿತ್ತು. ಆದರೆ ಇದೀಗ ಜೆಇಇ ಹಾಗೂ ನೀಟ್ ಪರೀಕ್ಷೆಗಾಗಿ ಎದುರು ನೋಡುತ್ತಿದ್ದ ವಿದ್ಯಾರ್ಥಿಗಳಿಗೆ ನಾಳೆ ಹೊಸ ವೇಳಾ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ.  

ಲಾಕ್ ಡೌನ್ ಹಿನ್ನೆಲೆ ಜೆಇಇ ಹಾಗೂ ನೀಟ್ ಪರೀಕ್ಷೆ ಕೂಡ ಮುಂದೂಡಲಾಗಿತ್ತು, ಹೊಸ ವೇಳಾ ಪಟ್ಟಿ ಯಾವಾಗ ಪ್ರಕಟವಾಗುತ್ತದೋ? ಎನ್ನುವುದರತ್ತ ವಿದ್ಯಾರ್ಥಿಗಳು ಮುಖಮಾಡಿದ್ದಾರೆ. ಹೊಸ ವೇಳಾ ಪಟ್ಟಿಯನ್ನು ಮೇ.5ರಂದು ಬಿಡುಗಡೆ ಮಾಡುವುದಾಗಿ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ತಿಳಿಸಿದೆ. ಈ ಕುರಿತು ಕೇಂದ್ರ ಸಚಿವ ರಮೇಶ್ ಪೋಖ್ರಿಯಾಲ್ ಹೊಸ ವೇಳಾಪಟ್ಟಿಯನ್ನು ನಾಳೆ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You May Also Like

ಸಲೂನ್ ಪಾರ್ಲರ್ ಗಳಿಗೆ ಹೋಗುವ ಮುನ್ನ ಈ ಸುಚನೆಗಳನ್ನೊಮ್ಮೆ ಓದಿ..

ಬೆಂಗಳೂರು: ಸರ್ಕಾರದಿಂದ ಅನುಮತಿ ದೊರೆತ ಹಿನ್ನೆಲೆಯಲ್ಲಿ 58 ದಿನ ಬಂದ್ ಆಗಿದ್ದ ನಗರದ ಸಲೂನ್, ಪಾರ್ಲರ್’ಗಳು…

ಇಟಲಿ ದಾಟಿ ಮುಂದೆ ಹೋದ ಭಾರತ!!

ನವದೆಹಲಿ: ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ.ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ…

ಮುಂಬೈ ಎಕ್ಸಪ್ರೆಸ್ ನಲ್ಲಿ ಬಂದಿಳಿದರು 124 ಜನ..!

ಮುಂಬೈನಲ್ಲಿದ್ದ ಜನರು ಇಂದು ಮುಂಬೈ-ಗದಗ ಎಕ್ಸಪ್ರೆಸ್ ರೈಲಿನ ಮೂಲಕ ಗದಗ ನಗರಕ್ಕೆ ಆಗಮಿಸಿದರು. ಇದರಲ್ಲಿ 124 ಜನರು ರೈಲಿನ ಮೂಲಕ ನಗರಕ್ಕೆ ಆಗಮಿಸಿದರು.

ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ

ರಾಮನಗರ: ಮೇಕೆದಾಟು ಯೋಜನೆಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಲು ಕಾಂಗ್ರೆಸ್ ಪಕ್ಷ ಜನವರಿ 9 ರಿಂದ…