ಹಾವೇರಿ: ಈವರೆಗೂ ಯಾವುದೇ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗದ ಹಿನ್ನೆಲೆ ಹಾವೇರಿ ಜಿಲ್ಲೆ ಗ್ರೀನ್ ಝೋನ್‌ನಲ್ಲಿತ್ತು. ಆದರೆ ಇದೀಗ ಹಾವೇರಿಯಲ್ಲೂ ಕೊರೋನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಈ ಮೂಲಕ ಏಲಕ್ಕಿ ನಾಡಿನಲ್ಲಿ ಮಹಾಮಾರಿ ಕೊರೋನಾ ಖಾತೆ ತೆರೆದಿದೆ.

ಹಾವೇರಿ ಜಿಲ್ಲೆಯ ಸವಣೂರ ತಾಲೂಕಿನ 32 ವರ್ಷದ ಸೋಂಕಿತ ಮುಂಬೈನಿಂದ ಲಾರಿಯ‌ ಮುಖಾಂತರ ಏಪ್ರೀಲ್ 28ರಂದು ಜಿಲ್ಲೆಗೆ ಬಂದಿದ್ದಾಗಿ ತಿಳಿದು ಬಂದಿದೆ. ಈ ಸಂಬಂಧ ಲಾರಿಯೊಂದಿಗೆ ಪ್ರಯಾಣಿಸಿದ್ದ ಮೂರು ಜನರ ಸ್ವಾಬ್ ಟೆಸ್ಟ್ ಮಾಡಲಾಗಿದೆ.  ಅದರಲ್ಲಿ ಒಬ್ಬರಿಗೆ ಕೊರೊನಾ‌ ಪಾಸಿಟಿವ್ ಪತ್ತೆಯಾಗಿದೆ. 21 ಜನರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿ ಹಾಗೂ ದ್ವಿತೀಯ ಹಂತದಲ್ಲಿ ಒಟ್ಟು 15 ಜನರನ್ನು ಸಂಪರ್ಕ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಜಿಲ್ಲಾಧಿಕಾರಿ ಕೃಷ್ಣ ಭಾಜಪೇಯಿ ಅವರಿಂದ ಮಾಧ್ಯಮಗಳಿಗೆಮಾಹಿತಿ

ಸೋಂಕಿತ ವ್ಯಕ್ತಿಗಯೊಂದಿಗೆ ಲಾರಿಯಲ್ಲಿ ಪ್ರಯಾಣಿಸಿದ್ದ  42 ವರ್ಷದ ಅಣ್ಣ ಹಾಗೂ 19 ವರ್ಷದ ಮಗನ ಸ್ವ್ಯಾಬ್ ಟೆಸ್ಟ್‌ಗಾಗಿ ಜಿಲ್ಲಾಡಳಿತ ಕಾಯುತ್ತಿದೆ. ಕೊರೋನಾ ಸೋಂಕು ಪತ್ತೆಯಿಂದಾಗಿ ಏಲಕ್ಕಿ ನಾಡಿನ ಜನರಲ್ಲಿ ಆತಂಕ ಮನೆ ಮಾಡಿದೆ.

Leave a Reply

Your email address will not be published. Required fields are marked *

You May Also Like

ಜಿಂದೇಶ್ಯಾವಲಿ ದರ್ಗಾ ಉರುಸು ರದ್ದುಗೊಳಿಸಿ ಡಿಸಿ ಆದೇಶ

ಕಳೆದ 15 ದಿನಗಳಿಂದ ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಗುಂಪು ಸೇರಬಹುದಾದ ಇತರ ಚಟುವಟಿಕೆಗಳಲ್ಲಿ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.

ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿ

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಮಗುಚಿ ಬಿದ್ದು ಸ್ಥಳದಲ್ಲಿ ಓರ್ವ ವ್ಯಕ್ತಿ ಸಾವನ್ನಪಿದ್ದು, ಐವರು ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ಲಕ್ಷ್ಮೇಶ್ವರ ತಾಲೂಕಿನ ಅಕ್ಕಿಗುಂಧ ರಸ್ತೆಯಲ್ಲಿ ನಡೆದಿದೆ.

ಕೊರೊನಾ ಖರ್ಚು ವೆಚ್ಚದ ಕುರಿತು ಶ್ವೇತಪತ್ರ ಹೊರಡಿಸಿ: ಸಿದ್ದರಾಮಯ್ಯ

ಬೆಂಗಳೂರು: ಕೊರೊನಾ ಸೋಂಕು ತಡೆಗಟ್ಟಲು ಕರ್ನಾಟಕ ಸಿಎಂ ಬಿ.ಎಸ್.ಯಡಿಯೂರಪ್ಪ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು-ವೆಚ್ಚಗಳು…

ದಾವಣಗೆರೆ ಜಿಲ್ಲೆ ಬಿಜೆಪಿ ಶಾಸಕರಿಗೆ ಕನಕಶ್ರೀ ಎಚ್ಚರಿಕೆ

ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಹವಣಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.