ಗದಗ: ಕೊವಿಡ್-19 ಸಾಂಕ್ರಾಮಿಕ ರೋಗ ನಿಯಂತ್ರಣಕ್ಕಾಗಿ ದೇಶಾದ್ಯಂತ ವಿಧಿಸಲಾದ ಲಾಕಡೌನ ಸಂದರ್ಭದಲ್ಲಿ ಹೊರ ರಾಜ್ಯಗಳಲ್ಲಿ ಸಿಲುಕಿರುವ  ಅಥವಾ ಸ್ವಂತ ರಾಜ್ಯಕ್ಕೆ ಸ್ಥಳಕ್ಕೆ  ಹೋಗಲು ಬಯಸುವ ವಲಸೆ ಕಾರ್ಮಿಕರು, ವಿದ್ಯಾರ್ಥಿಗಳು,ಪ್ರವಾಸಿಗರು ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಒಬ್ಬರೇ ಆಗಿದ್ದಲ್ಲಿ ಆಧಾರ, ಚುನಾವಣಾ, ವಾಹನ ಚಾಲನೆ ಅಥವಾ ಪಾಸಪೋರ್ಟ್ ಗುರುತಿನ ಚೀಟಿ ಮತ್ತು ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದಲ್ಲಿ ಕುಟುಂಬದ ಭಾವಚಿತ್ರ ಕಡ್ಡಾಯವಾಗಿ ಸಲ್ಲಿಸಬೇಕು.

ಸೇವಾಸಿಂಧು ಕೇಂದ್ರಗಳು: ಕರ್ನಾಟಕ ಒನ್ ಕೇಂದ್ರ, ಎಲ್ಲ ತಹಶೀಲ್ದಾರರ ಕಾರ್ಯಲಯಗಳು, ನಾಡಕಚೇರಿಗಳು, ನಗರಸಭೆ, ಪುರಸಭೆ, ನಾಗರೀಕ ಸೇವಾ ಕೇಂದ್ರಗಳು, ಗ್ರಾಮ ಪಂಚಾಯತಗಳಲ್ಲಿನ ಬಾಪೂಜಿ ಸೇವಾ ಕೇಂದ್ರಗಳಲ್ಲಿ  ಪ್ರಯಾನದ ಅನುಮತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಕೇಂದ್ರಗಳಲ್ಲಿ ಸಾರ್ವಜನಿಕರು ಮತ್ತು ಆಯಾ ಕಚೇರಿಗಳವರು ಸಾಮಾಜಿಕ ಅಂತರ ಕಾಯ್ದುಕೊಳ್ಳುವದನ್ನು ಕಡ್ಡಾಯವಾಗಿ ಅನುಸರಿಸುವ ನಿಯಮ ಕಡ್ಡಾಯವಾಗಿಸಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಕರ್ತವ್ಯ ನಿರತ ಸಾರಿಗೆ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿಪಡಿಸುವವರ ಮೇಲೆ ಕ್ರಮಕ್ಕೆ ಗದಗ ಡಿಸಿ ಸೂಚನೆ!

ವಾಕರಾರಸಾ ಸಂಸ್ಥೆಯ ನಿರ್ವಾಹಕರು ಹಾಗೂ ಚಾಲಕರು ಮತ್ತು ಸಿಬ್ಬಂದಿಗಳು ನೀಡಿದ ಅನಿರ್ದಿಷ್ಟಾವಧಿ ಮುಷ್ಕರದಿಂದ ಸಾರ್ವಜನಿಕರಿಗೆ ಸಂಚರಿಸಲು ತೊಂದರೆಯಾಗುತ್ತಿದೆ. ಕನಿಷ್ಟ ದರದಲ್ಲಿ ಸಾರಿಗೆ ಸೇವೆ ಒದಗಿಸಲು ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಸೂಚಿಸಿದರು.

ಅಂಕಗಳಿಕೆಯ ವಿಷಯ ಜ್ಞಾನದಿಂದ ಮಾತ್ರ ಶಿಕ್ಷಣ ಪರಿಪೂರ್ಣವಾಗುವುದಿಲ್ಲ

ಸ್ಕೌಟ್ಸ್ ಮತ್ತು ಗೈಡ್ಸಗಳು ಸನ್ನಡತೆ, ಸದ್ಭಾವನೆ, ಶಿಸ್ತು ಮತ್ತು ಸೇವಾ ಮನೋಭಾವದಂಥ ಶಿಕ್ಷಣ ಪಡೆದು ಭಾರತೀಯ ಸಂಪನ್ಮೂಲ ವ್ಯಕ್ತಿಗಳಾಗಿ ಹೊರಹೊಮ್ಮುತ್ತಿರುವುದು ಹೆಮ್ಮೆಯ ವಿಚಾರ ಎಂದು ಸ್ಕೌಟ್ಸ್ ಮತ್ತು ಗೈಡ್ಸ ತಾಲೂಕಾಧ್ಯಕ್ಷ ಶೀಥಲ ಬಾಗಮಾರ ಹೇಳಿದರು.

ಸಸ್ಯ ಪ್ರೇಮ ನಿತ್ಯ ಮೂಡಲಿ-ಶಿವಾನಂದ ಪಟ್ಟಣಶೆಟ್ಟರ

ವರದಿ : ಗುಲಾಬಚಂದ ಜಾಧವಆಲಮಟ್ಟಿ: ಸಕಲ ಜೀವ ಸಂಕುಲಗಳಿಗೆ ಪ್ರಕೃತಿ ಮಾತೆಯೆ ಆಧಾರ.ಪ್ರಕೃತಿ ಸೃಷ್ಟಿಯಿಂದಲೇ ನಮಗೆಲ್ಲ…