ಅಮೆರಿಕದಲ್ಲಿ ಮಹಾಮಾರಿಯ ಅಟ್ಟಹಾಸ ತಗ್ಗಿತೇ?

ವಾಷಿಂಗ್ಟನ್ : ಮಹಾಮಾರಿ ವೈರಸ್ ನಿಂದ ತತ್ತರಿಸಿ ಹೋಗಿದ್ದ ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಕಂಡುಬಂದಿದೆ.

ನಿನ್ನೆ ಒಂದೇ ದಿನ ಅಮೆರಿಕದಲ್ಲಿ 1,015 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿತ್ತು. ಇದು ಅಮೆರಿಕದಲ್ಲಿ ದಾಖಲಾದ ಒಂದು ದಿನದ ಕನಿಷ್ಠ ಸೋಂಕಿತರ ಸಂಖ್ಯೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ನೀಡಿದೆ.

ಕಳೆದ ಒಂದು ತಿಂಗಳಿನಿಂದ ಅಮೆರಿಕದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿತ್ತು. ಆದರೆ ನಿನ್ನೆ ಕೊಂಚ ತಗ್ಗಿದ್ದು ತಿಂಗಳಲ್ಲೇ ಇದೇ ಮೊದಲ ಬಾರಿಗೆ ಕನಿಷ್ಠ ಹೊಸ ಸೋಂಕಿತರ ಪ್ರಮಾಣ ದಾಖಲಾಗಿದೆ. ವೈರಸ್ ಗೆ 68,689 ಜನ ಬಲಿಯಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿ, ಅಮೆರಿಕದಲ್ಲಿ ಕೊರೊನಾ ವೈರಸ್ ಗೆ ಕನಿಷ್ಠ 1 ಲಕ್ಷದಿಂದ 2.5 ಲಕ್ಷದವರೆಗೂ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Leave a Reply

Your email address will not be published.

You May Also Like

ರೋಣಕ್ಕೆ 5 ಆಮ್ಲಜನಕ ಸಾಂದ್ರಕ ಹಸ್ತಾಂತರಿಸಿದ ಡಿಸಿಎಂ

ರೋಣ: ಕೋವಿಡ್‌ ಸೋಂಕಿತರ ಪಾಲಿಗೆ ಆಪ್ತರಕ್ಷಕನಂತೆ ನೆರವಿಗೆ ಬರುತ್ತಿರುವ ʼಆಮ್ಲಜನಕ ಸಾಂದ್ರಕʼಗಳನ್ನು ಒದಗಿಸುವ ಕೆಲಸ ಮುಂದುವರಿದಿದ್ದು, ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಶುಕ್ರವಾರ ವಿವಿಧ ವಿಧಾನಸಭೆ ಕ್ಷೇತ್ರಗಳಿಗೆ 30 ಸಾಂದ್ರಕಗಳನ್ನು ಹಸ್ತಾಂತರಿಸಿದ್ದು, ಇದರಲ್ಲಿ ರೋಣ ಕ್ಷೇತ್ರಕ್ಕೂ 5 ಸಾಂದ್ರಕ ವಿತರಿಸಿದ್ದಾರೆ.

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್..!

ಗಂಗಾವತಿ : ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯಲ್ಲಿ ಸೋಂಕು ಇರುವುದು ಖಚಿತವಾಗಿದೆ. ಈ ಘಟನೆ ಕಾರಟಗಿಯಲ್ಲಿ…

ಮೋದಿ, ಬಿಡೆನ್ ಮುಂದೆ ಇರುವ ಸವಾಲುಗಳೇನು?

ನವದೆಹಲಿ : ಅಮೆರಿಕದ 46ನೇ ಅಧ್ಯಕ್ಷರಾಗಿ ಡೆಮಾಕ್ರಟಿಕ್ ಪಕ್ಷದ ಜೋ ಬಿಡೆನ್ ಆಯ್ಕೆಯಾಗಿದ್ದಾರೆ. ಹೀಗಾಗಿ ದೇಶದ ಬಹುತೇಕ ರಾಷ್ಟ್ರಗಳು ಸ್ನೇಹ ಸಂಬಂಧದ ಕುರಿತು ಚರ್ಚೆ ನಡೆಸುತ್ತಿವೆ.