ಅಮೆರಿಕದಲ್ಲಿ ಮಹಾಮಾರಿಯ ಅಟ್ಟಹಾಸ ತಗ್ಗಿತೇ?

ಅಮೆರಿಕದಲ್ಲಿ ಮಹಾಮಾರಿಯ ಅಟ್ಟಹಾಸ ತಗ್ಗಿತೇ?

ವಾಷಿಂಗ್ಟನ್ : ಮಹಾಮಾರಿ ವೈರಸ್ ನಿಂದ ತತ್ತರಿಸಿ ಹೋಗಿದ್ದ ಅಮೆರಿಕದಲ್ಲಿ ಇದೇ ಮೊದಲ ಬಾರಿಗೆ ಕಡಿಮೆ ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಕಂಡುಬಂದಿದೆ.

ನಿನ್ನೆ ಒಂದೇ ದಿನ ಅಮೆರಿಕದಲ್ಲಿ 1,015 ಹೊಸ ಪಾಸಿಟಿವ್ ಪ್ರಕರಣಗಳು ಕಂಡು ಬಂದಿತ್ತು. ಇದು ಅಮೆರಿಕದಲ್ಲಿ ದಾಖಲಾದ ಒಂದು ದಿನದ ಕನಿಷ್ಠ ಸೋಂಕಿತರ ಸಂಖ್ಯೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ ನೀಡಿದೆ.

ಕಳೆದ ಒಂದು ತಿಂಗಳಿನಿಂದ ಅಮೆರಿಕದಲ್ಲಿ ಕೊರೊನಾ ವೈರಸ್ ಆರ್ಭಟ ಜೋರಾಗಿತ್ತು. ಆದರೆ ನಿನ್ನೆ ಕೊಂಚ ತಗ್ಗಿದ್ದು ತಿಂಗಳಲ್ಲೇ ಇದೇ ಮೊದಲ ಬಾರಿಗೆ ಕನಿಷ್ಠ ಹೊಸ ಸೋಂಕಿತರ ಪ್ರಮಾಣ ದಾಖಲಾಗಿದೆ. ವೈರಸ್ ಗೆ 68,689 ಜನ ಬಲಿಯಾಗಿದ್ದಾರೆ.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತನಾಡಿ, ಅಮೆರಿಕದಲ್ಲಿ ಕೊರೊನಾ ವೈರಸ್ ಗೆ ಕನಿಷ್ಠ 1 ಲಕ್ಷದಿಂದ 2.5 ಲಕ್ಷದವರೆಗೂ ಸಾವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Exit mobile version