ರಾಜ್ಯ ಸರ್ಕಾರಿ ನೌಕರರ ಡಿಎ ಗೆ ಕತ್ತರಿ..!

ಬೆಂಗಳೂರು: ಲಾಕ್‌ಡೌನ್ ಪರಿಣಾಮ ಸರ್ಕಾರದ ಬೊಕ್ಕಸಕ್ಕೆ ಭಾರಿ ಪೆಟ್ಟು ನೀಡಿದೆ. ಇದರಿಂದಾಗಿ ಸರ್ಕಾರ ಕೂಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಈ ಕಾರಣದಿಂದ ರಾಜ್ಯ ಸರ್ಕಾರ ನೌಕರರ ಡಿಎ ಕಡಿತಗೊಳಿಸಿ ಆದೇಶ ಹೊರಡಿಸಿದೆ. ಈ ಆದೇಶ ತುಟ್ಟಿಭತ್ಯೆ ಕಡಿತ ಪಿಂಚಣಿದಾರರ, ಯುಜಿಸಿ, ಐಸಿಎಆರ್‍, ಎಐಸಿಟಿಇ, ಎನ್‌ಜೆಪಿಸಿ ಶ್ರೇಣಿಯ ನೌಕರರಿಗೂ ಅನ್ವಯವಾಗಿತ್ತದೆ. ಕೇಂದ್ರ ಸರಕಾರ ಈಗಾಗಲೇ ಈ ಕ್ರಮ ಜಾರಿಗೆ ತಂದಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅದನ್ನೇ ಜಾರಿಗೆ ತರಲಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Exit mobile version