ಕೊರೊನಾ ವಾರಿಯರ್ಸ್ ಗೆ ಸಿಗದ ಸಂಬಳ!

ರಾಯಚೂರು: ಕೊರೊನಾ ವಿರುದ್ಧ ಆರೋಗ್ಯ ಇಲಾಖೆ ಸಿಬ್ಬಂದಿಗಳು ಹೋರಾಡುತ್ತಿದ್ದಾರೆ. ಆದರೆ, ಇವರ ಸಂಬಳಕ್ಕೆ ಕತ್ತರಿ ಹಾಕಿರುವುದು ಬೆಳಕಿಗೆ ಬಂದಿದೆ.
ಇಲ್ಲಿಯ ಕೋವಿಡ್ ಆಸ್ಪತ್ರೆಗಳಾದ ಓಪೆಕ್ ಹಾಗೂ ರಿಮ್ಸ್ ಸಿಬ್ಬಂದಿಗೆ ಮೂರು ತಿಂಗಳಿನಿಂದ ಸಂಬಳವನ್ನೇ ನೀಡಿಲ್ಲ. ವೇತನವಿಲ್ಲದೆ ಸಾವಿರಕ್ಕೂ ಅಧಿಕ ಸಿಬ್ಬಂದಿ ನಿತ್ಯ ದುಡಿಯುತ್ತಿದ್ದಾರೆ. ರಿಮ್ಸ್ ದಲ್ಲಿ ಬಹುತೇಕ ಸಿ ಹಾಗೂ ಡಿ ಗ್ರೂಪ್ ನೌಕರರಿಗೆ ವೇತನವಾಗಿಲ್ಲ ಎಂದು ತಿಳಿದು ಬಂದಿದೆ.
ಸರ್ಕಾರ ಈ ಸಂದರ್ಭದಲ್ಲಿಯೇ ಆರೋಗ್ಯ ಇಲಾಖೆ ಸಿಬ್ಬಂದಿಯ ಸಂಬಳಕ್ಕೆ ಕತ್ತರಿ ಹಾಕಿರುವುದಕ್ಕೆ ತೀವ್ರ ವಿರೋಧಗಳು ವ್ಯಕ್ತವಾಗುತ್ತಿವೆ. ಇನ್ನಾದರೂ ಸರ್ಕಾರ ಎಚ್ಚೆತ್ತುಕೊಂಡು ವೈದ್ಯಕೀಯ ಸಿಬ್ಬಂದಿಗೆ ಸಂಬಳ ನೀಡಬೇಕು ಎಂದು ಜನರು ಹಾಗೂ ವೈದ್ಯಕೀಯ ಸಿಬ್ಬಂದಿ ಮನವಿ ಮಾಡುತ್ತಿದ್ದಾರೆ.

Exit mobile version