ಚಿತ್ರದುರ್ಗ: ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಈ ಪೈಕಿ ಹೊಸಕೋಟೆಯ 13 ಜನರಿದ್ದು, ಇನ್ನುಳಿದ ಐವರು ಆಂಧ್ರದ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ಗಲಾಟೆ ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆ ನಂತರ ತಹಶಿಲ್ದಾರ್ ವರದರಾಜು ಸೇರಿದಂತೆ ಅಧಿಕಾರಿಗಳಿಂದ ಗ್ರಾಮಸ್ಥರ ಮನವೊಲಿಸಲಾಯಿತು. ಇಂದು ಬೆಳಿಗ್ಗೆ 5ಕ್ಕೆ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಯಿತು.

ಸದ್ಯ ಹಾಸ್ಟೇಲನ್ನು ಸೀಲ್ ಡೌನ್ ಮಾಡಲಾಗಿದೆ. ಪಾವಗಡ ಪಿಎಸ್ಐ ನಾಗರಾಜು, ವೈದ್ಯಾಧಿಕಾರಿ ತಿರುಪತಿ ಸ್ಥಳದಲ್ಲಿ ಸೇವೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ 15 ಕಂಟೇನ್ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಗದಗ: ಜಿಲ್ಲೆಯ ಕೊವಿಡ್-19 ಸೋಂಕು ನಿಯಂತ್ರಣಕ್ಕಾಗಿ ಸೋಂಕಿನ ಸಕಾರಾತ್ಮಕ ಪ್ರಕರಣಗಳು ವರದಿಯಾದ ಕೆಳಕಂಡ 15 ಪ್ರದೇಶಗಳನ್ನು ನಿರ್ಬಂಧಿತ ಪ್ರದೇಶಗಳೆಂದು ಘೋಷಿಸಲಾಗಿತ್ತು.

24ರಂದು ನಗರ ಸಭೆ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ

ಗದಗ-ಬೆಟಗೇರಿ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆಸಲು ಜ. 24 ರಂದು ತೀರ್ಮಾನಿಸಲಾಗಿದೆ. ಈ…

ದೇವಾಂಗ ಸಮಾಜದ ಅಭಿವೃದ್ಧಿಗೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಒತ್ತಾಯ

ರಾಜ್ಯದಲ್ಲಿ ದೇವಾಂಗ ಸಮಾಜ ಅತ್ಯಂತ ಆರ್ಥಿಕವಾಗಿ ರಾಜಕೀಯ ಹಾಗು ಶೈಕ್ಷಣಿಕವಾಗಿ ಮತ್ತು ಸಮಾಜಿಕವಾಗಿ ಅತ್ಯಂತ ಹಿಂದುಳಿದ ಸಮಾಜವಾಗಿದ್ದು ಸಮಾಜದ ಸರ್ವತೋಮುಖ ಅಭಿವೃದ್ಧಿಗಾಗಿ ದೇವಾಂಗ ಅಭಿವೃದ್ಧಿ ಮಂಡಳಿ ಅಥವಾ ನಿಗಮವನ್ನು ಸ್ಥಾಪಿಸಬೇಕೆಂದು ಒತ್ತಾಯಿಸಿ

ಹುಬ್ಬಳ್ಳಿ ತಲುಪಿದ ವಿವಿಧ ಜಿಲ್ಲೆಗಳ ಜನರು!!

ಹುಬ್ಬಳ್ಳಿ: ದೆಹಲಿ- ಬೆಂಗಳೂರು ಶ್ರಮಿಕ ಎಕ್ಸ್ ಪ್ರೆಸ್ ರೈಲಿನ ಮೂಲಕ ರಾಜ್ಯದ ವಿವಿಧ 13 ಜಿಲ್ಲೆಗಳ…