ಚಿತ್ರದುರ್ಗ: ಅಹಮದಾಬಾದ್ ನಿಂದ ಬಂದು ಚಿತ್ರದುರ್ಗದಲ್ಲಿ ಪತ್ತೆಯಾಗಿದ್ದ ತುಮಕೂರಿನ 17 ಜನ ತಬ್ಲಿಘಿಗಳನ್ನು ಪಾವಗಡದ ವೈ.ಎನ್.ಹೊಸಕೋಟೆಯ ಕುರುಬರಹಳ್ಳಿ ಬಳಿಯ ಬಾಲಕಿಯರ ವಸತಿ ನಿಲಯದಲ್ಲಿ ಕ್ವಾರಂಟೈನ್ ಮಾಡಲಾಗಿದೆ. ಈ ಪೈಕಿ ಹೊಸಕೋಟೆಯ 13 ಜನರಿದ್ದು, ಇನ್ನುಳಿದ ಐವರು ಆಂಧ್ರದ ಮೂಲದವರಾಗಿದ್ದಾರೆ ಎಂದು ತಿಳಿದು ಬಂದಿದೆ.

ಕ್ವಾರಂಟೈನ್ ಮಾಡಲು ಅವಕಾಶ ಕೊಡದೆ ಸ್ಥಳೀಯರು ಆರಂಭದಲ್ಲಿ ಗಲಾಟೆ ಪ್ರಾರಂಭಿಸಿದ್ದರು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆ ನಂತರ ತಹಶಿಲ್ದಾರ್ ವರದರಾಜು ಸೇರಿದಂತೆ ಅಧಿಕಾರಿಗಳಿಂದ ಗ್ರಾಮಸ್ಥರ ಮನವೊಲಿಸಲಾಯಿತು. ಇಂದು ಬೆಳಿಗ್ಗೆ 5ಕ್ಕೆ ಎಲ್ಲರನ್ನೂ ಕ್ವಾರಂಟೈನ್ ಮಾಡಲಾಯಿತು.

ಸದ್ಯ ಹಾಸ್ಟೇಲನ್ನು ಸೀಲ್ ಡೌನ್ ಮಾಡಲಾಗಿದೆ. ಪಾವಗಡ ಪಿಎಸ್ಐ ನಾಗರಾಜು, ವೈದ್ಯಾಧಿಕಾರಿ ತಿರುಪತಿ ಸ್ಥಳದಲ್ಲಿ ಸೇವೆ ನೀಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಮ್ಸ್ ಯಡವಟ್ಟು : ಕೊರೊನಾ ಸೋಂಕಿತರ ಲೀಸ್ಟ್ ಲೀಕ್ ಔಟ್…?

ಕೊರೊನಾ ಗೈಡ್ ಲೈನ್ ಪ್ರಕಾರ ಸೋಂಕಿತರ ಹೆಸರನ್ನು ಬಹಿರಂಗಗೊಳಿಸಬಾರದು. ಆದರೆ ಇಂದು ಬೆಳಿಗ್ಗೆಯಿಂದಲೇ ಸೋಂಕಿತರ ಹೆಸರು ಇರುವ ಲೀಸ್ಟ್ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ರಾಜ್ಯದಲ್ಲಿಂದು 178 ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ಇಂದು ರಾಜ್ಯದಲ್ಲಿ ಮತ್ತೆ 178 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು…

ಸಿದ್ಧರಾಮಯ್ಯ ಗೆ ಅಹಿಂದ ಮತದಾರರ ಬೆಂಬಲ

ಉತ್ತರಪ್ರಭ ಸುದ್ದಿ ಬಸವನಬಾಗೇವಾಡಿ: ಶಿವಾನಂದ ಪಾಟೀಲ ಎರಡೂ ಬಾರಿ ಬಸವನಬಾಗೇವಾಡಿ ಕ್ಷೇತ್ರದಲ್ಲಿ ಸ್ಪರ್ಧಿಸಿದಾಗ ಎರಡೂ ಬಾರಿ…

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.