ಡಿಸಿ ಬಂಗಲೆಯಲ್ಲಿ ಶೂಟ್ ಮಾಡಿಕೊಂಡ ಪೊಲೀಸ್ ಪೇದೆ

ಬೆಳಗಾವಿ: ಜಿಲ್ಲಾಧಿಕಾರಿ ಬಂಗಲೆಯಲ್ಲಿಯೇ ಗುಂಡು ಹಾರಿಸಿಕೊಂಡು ಪೊಲೀಸ್ ಪೇದೆಯೊರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಡಿಸಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರ ಬಂಗಲೆಯಲ್ಲಿ ಗಾರ್ಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಕಾಶ ಗುರವಯ್ಯನವರ ಆತ್ಮಹತ್ಯೆ ಮಾಡಿಕೊಂಡಿರುವ ಸಿಎಆರ್ ಪೊಲೀಸ್ ಪೇದೆ ಎಂದು ಗುರುತಿಸಲಾಗಿದೆ. ಕಿತ್ತೂರು ತಾಲೂಕಿನ ಅಂಬಡಗಟ್ಟಿ ಗ್ರಾಮದ ಪ್ರಕಾಶ್, ಗಾರ್ಡ್ ರೂಮ್‌ನಲ್ಲಿ ಕುಳಿತ ಜಾಗದಲ್ಲಿಯೇ ಎಸ್‌ಎಲ್‌ಆರ್ ಬಂದೂಕಿನಿ0ದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಬಿ.ಎಸ್.ಲೋಕೇಶ್‌ಕುಮಾರ್ ಭೇಟಿ ನೀಡಿ ಮಾಹಿತಿ ಕಲೆ ಹಾಕಿದ್ದಾರೆ. ಕಳೆದ ಎರಡು ವರ್ಷಗಳಿಂದ ಸ್ಟಿಜೋಪಿನಿಯಾ ಎಂಬ ಮನೋವ್ಯಾಧಿಯಿಂದ ಪ್ರಕಾಶ್ ಬಳಲುತ್ತಿದ್ದ ಎನ್ನಲಾಗಿದೆ. ಈ ಸಂಬಂಧ ಡಿಸಿ ಎಸ್.ಬಿ.ಬೊಮ್ಮನಹಳ್ಳಿ ಸೇರಿ ಮನೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಯಿ0ದ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಕುರಿತು ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Exit mobile version