ಬೆಂಗಳೂರು: ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಟ್ಟು 20 ಹೊಸ ಕರೋನಾ ಪ್ರಕರಣಗಳು ಕಂಡು ಬಂದಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಕರೋನಾ ಪೀಡಿತರ ಸಂಖ್ಯೆ 693 ತಲುಪಿದ್ದು 354 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಗಳಿಂದ ಬಿಡುಗಡೆ ಹೊಂದಿದ್ದಾರೆ. ಸಕ್ರಿಯವಾಗಿರುವ 309 ಪ್ರಕರಣಗಳಲ್ಲಿ 303 ಮಂದಿ ರೋಗಿಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು,  66 ಮಂದಿ ತೀವ್ರ ನಿಗಾ ಘಟಕದಲ್ಲಿದ್ದಾರೆ. ರಾಜ್ಯದಲ್ಲಿ ಕರೋನಾ ಸೋಂಕಿನಿಂದ 29 ಮಂದಿ ಅಸುನೀಗಿದ್ದಾರೆ. ಹೊಸದಾಗಿ ಪತ್ತೆಯಾಗಿರುವ ಪ್ರಕರಣದಲ್ಲಿ ಬಾಗಲಕೋಟೆಯಲ್ಲಿ 13 ಪ್ರಕರಣಗಳು ಕಂಡುಬಂದಿದ್ದು ದಕ್ಷಿಣ ಕನ್ನಡದಲ್ಲಿ 3 ಪ್ರಕರಣಗಳು ಪತ್ತೆಯಾಗಿವೆ. ಬೆಂಗಳೂರು ನಗರದಲ್ಲಿ ಎರಡು ಮತ್ತು ಕಲಬುರಗಿ ಹಾಗೂ ವಿಜಯಪುರದಲ್ಲಿ ತಲಾ ಎರಡು ಪ್ರಕರಣಗಳು ದಾಖಲಾಗಿವೆಯೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಸಿಎಂ ಯಡಿಯೂರಪ್ಪ ಪ್ರಧಾನಿ ಮೋದಿ ಅವರಿಗೆ ನೀಡಿದ ಸಲಹೆ ಏನು?

ಗ್ರೀನ್ ಝೋನ್‌ಗಳಲ್ಲಿಯೂ ಕೊರೊನಾ ಪ್ರಕರಣಗಳು ಕಂಡು ಬರುತ್ತಿದ್ದು, ಮೂರನೇ ಹಂತದ ಲಾಕ್‌ಡೌನ್‌ನಲ್ಲಿ ವಿಧಿಸಲಾಗಿರುವ ನಿಯಮಗಳೇ ಮೇ 17ರ ನಂತರವೂ ಮುಂದುವರಿಯಲಿ ಎಂದು ಸಿಎಂ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಗದಗ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 4 ಕ್ಕೆ ಏರಿಕೆ..!

ಗದಗ : ಜಿಲ್ಲೆಯಲ್ಲಿ ಕೊರೋನಾಗೆ ಇಂದು ಮತ್ತೊಂದು ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 4…

ಅನರ್ಹ ಮತ್ತು ನಕಲಿ ಪಡಿತರ ಚೀಟಿ ರದ್ದುಪಡಿಸಲು ಕ್ರಮ: ಮುಖ್ಯಮಂತ್ರಿ ಸೂಚನೆ

ಕಾರ್ಡ್ ಹೊಂದಿರುವ ಸರ್ಕಾರಿ ನೌಕರರು, ಟ್ರಾಕ್ಟರ್, ಇತರೆ ವಾಹನ ಹೊಂದಿರುವವರು ತಮ್ಮ ಕಾರ್ಡುಗಳನ್ನು ಕೂಡಲೇ ಹಿಂತಿರುಗಿಸಿ, ರದ್ದುಪಡಿಸಿಕೊಳ್ಳಬೇಕು. ಇಲ್ಲವಾದಲ್ಲಿ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕಾಣೆಯಾಗಿದ್ದ ಸಹೋದರಿ – ಸಹೋದರನನ್ನು ಒಂದುಗೂಡಿಸಿದ ಕೊರೊನಾ!

ಬಳ್ಳಾರಿ: ಹಲವು ವರ್ಷಗಳಿಂದ ದೂರವಾಗಿದ್ದ ಅಣ್ಣ – ತಂಗಿಯನ್ನು ಮಹಾಮಾರಿ ಒಂದುಗೂಡಿಸಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ…