ನವದೆಹಲಿ: ಹತ್ತನೇ ತರಗತಿ ಸಿಬಿಎಸ್ಇ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆದೇಶ ಹೊರಡಿಸಿದೆ. ಈಶಾನ್ಯ ದೆಹಲಿ ಹೊರತು ಪಡಿಸಿ ದೇಶದೆಲ್ಲೆಡೆ ಸಿಬಿಎಸ್ಇ ಹತ್ತನೇ ತರಗತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ರದ್ದು ಪಡಿಸಲಾಗಿದೆ.
ಸಿಬಿಎಸ್ಇ ಪಠ್ಯಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವು ಪರೀಕ್ಷೆಗಳು ಮುಗಿದಿದ್ದು ಇನ್ನು ಕೆಲವು ಪರೀಕ್ಷೆಗಳು ಮಾತ್ರ ಬಾಕಿ ಉಳಿದಿದ್ದವು. ಬಾಕಿ ಉಳಿದ ವಿಷಯಗಳಿಗೆ ಪರೀಕ್ಷೆ ನಡೆಯುವದಾದರೆ ವಿದ್ಯಾರ್ಥಿಗಳಿಗೆ ಪುನರ್ಮನಕ್ಕಾಗಿ ಹತ್ತು ದಿನಹಳ ಕಾಲಾವಕಾಶ ನೀಡಲಾಗುವುದು ಎಂದು ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಸಚಿವ ರಮೇಶ್ ಪೋಖ್ರಿಯಾಲ್ ಟ್ವೀಟ್ ಮೂಲಕ ತಿಳಿಸಿದ್ದಾರೆ.