ನವದೆಹಲಿ: ಕೊರೊನಾ ಹಾವಳಿ ದಿನದಿಂದ ದಿನಕ್ಕೆಹೆಚ್ಚಾಗುತ್ತಿದ್ದು, ಇಲ್ಲಿಯವರೆಗೂ ಜಗತ್ತಿನಲ್ಲಿ 2.48 ಲಕ್ಷ ಜನರು ಸಾವನ್ನಪ್ಪಿದ್ದಾರೆ. ದೇಶದಲ್ಲಿಯೂ ಸೋಂಕಿತರ ಸಂಖ್ಯೆ 50 ಸಾವಿರ ಗಡಿಗೆ ಬಂದು ನಿಂತಿದೆ.
ಜಗತ್ತಿನಾದ್ಯಂತ 37 ಲಕ್ಷಕ್ಕೂ ಅಧಿಕ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಲ್ಲಿಯವರೆಗೆ 12.41 ಲಕ್ಷ ಜನರನ್ನು ಇದು ಬಲಿ ಪಡೆದಿದೆ. ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 49,400ಕ್ಕೆ ಏರಿಕೆ ಕಂಡಿದೆ. ಈ ಪೈಕಿ 1,693 ಜನ ಸಾವನ್ನಪ್ಪಿದ್ದಾರೆ. ಸೋಂಕಿತ ಪ್ರಕರಣಗಳ ಪಟ್ಟಿಯಲ್ಲಿ ಭಾರತ ಸದ್ಯ 15ನೇ ಸ್ಥಾನದಲ್ಲಿದೆ.

ಅಮೆರಿಕದಲ್ಲಿ ಅತೀ ಹೆಚ್ಚು ಜನರು ಸೋಂಕಿಗೆ ಬಲಿಯಾಗಿದ್ದಾರೆ. ಇಲ್ಲಿ 12.37 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. 72,200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ. ಸ್ಪೇನ್ ನಲ್ಲಿ 2.50 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 25,600ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಇಟಲಿಯಲ್ಲಿ 2.13 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 29,300ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಯುಕೆಯಲ್ಲಿ 1.94 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 29,400ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

You May Also Like

ಸರ್ಕಾರಿ ನೌಕರರು ಡಿ.31ರೊಳಗೆ ಆಸ್ತಿ ಹೊಣೆಗಾರಿಕೆ ಸಲ್ಲಿಸಲು ಸೂಚನೆ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಆರ್ಥಿಕ ವರ್ಷದ ಬದಲಿಗೆ ಕ್ಯಾಲೆಂಡರ್ ವರ್ಷದ ಕೊನೆಯಲ್ಲಿ ಆಸ್ತಿ ಹೊಣೆಗಾರಿಕೆ ವಿವರಗಳನ್ನು ಸಲ್ಲಿಸುವಂತೆ ಆದೇಶ ಹೊರಡಿಸಿದೆ.

ಕೆಲಸ ಮಾಡುವಾಗ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು

ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ: ಕುಟುಂಬಸ್ಥರ ಆರೋಪ ಗದಗ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ…

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 40,263ಕ್ಕೆ ಏರಿಕೆ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೆ ಇದೆ. ಕಳೆದ 24 ಗಂಟೆಗಳಲ್ಲಿ 2,487 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸಂಖ್ಯೆ 40,263ಕ್ಕೆ ಏರಿಕೆಯಾಗಿದೆ.