ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ.
ವಾಯುವ್ಯ ದೆಹಲಿಯ ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಈ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಸೋಂಕು ಇರುವುದು ಖಚಿತವಾಗಿದೆ. ಮೃತ ಪೊಲೀಸ್ ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ.