ನವದೆಹಲಿ: ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿಯ ಆಸ್ಪತ್ರೆಗೆ ದಾಖಲಾಗಿದ್ದ ಪೊಲೀಸ್ ಪೇದೆಯೊಬ್ಬರು ಮೃತ ಪಟ್ಟಿದ್ದು, ಅವರಲ್ಲಿ ಕೊರೊನಾ ಸೋಂಕು ಇರುವುದು ಖಚಿತವಾಗಿದೆ. 

ವಾಯುವ್ಯ ದೆಹಲಿಯ ಭಾರತ್ ನಗರ ಪೊಲೀಸ್ ಠಾಣೆಯಲ್ಲಿ ಈ ಪೇದೆ ಕರ್ತವ್ಯ ನಿರ್ವಹಿಸುತ್ತಿದ್ದರು. ನಿನ್ನೆ ರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬಂದಿತ್ತು. ಈ ಹಿನ್ನೆಲೆಯಲ್ಲಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಅವರಲ್ಲಿ ಸೋಂಕು ಇರುವುದು ಖಚಿತವಾಗಿದೆ.  ಮೃತ ಪೊಲೀಸ್ ಪತ್ನಿ ಮತ್ತು ಮೂರು ವರ್ಷದ ಮಗುವನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *

You May Also Like

ವಿರಾಟ್ ಕೊಹ್ಲಿ ಬಗ್ಗೆ ಕೋಚ್ ಹೇಳಿದ್ದೇನು?

ಮುಂಬಯಿ : ಭಾರತ ತಂಡದ ನಾಯಕ ವಿರಾಟ್ ಪರಿಸ್ಥಿತಿಗೆ ತಕ್ಕಂತೆ ತಮ್ಮ ಆಟ ಬದಲಾಯಿಸುತ್ತಾರೆ. ಇದೇ…

ಗದಗ ಜಿಲ್ಲೆಯಲ್ಲಿ ಸೋಂಕಿನ ಏಕ್-ದಮ್ ನೆಗೆತ: ಯಾವ ಊರಲ್ಲಿ ಎಷ್ಟು?

ಗದಗ ಜಿಲ್ಲೆಯ ಮಟ್ಟಿಗೆ ಈ ಹಿಂದೆ ಒಂದೇ ದಿನ 24 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದು ಗರಿಷ್ಠ…

ಪ್ರೀತಿಸಿ ಓಡಿ ಹೋದವರು ಕ್ವಾರಂಟೈನ್ ನಲ್ಲಿಯೇ ಮದುವೆಯಾದರು

ಕೊರೊನಾ ಮಹಾರಮಾರಿಯ ಆಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಸದ್ಯ ಜನರ ಪ್ರತಿಯೊಂದು ಕಾರ್ಯಕ್ಕೂ ಅಡ್ಡಿಯಾಗಿದೆ.

ಲಾಕ್ ಡೌನ್ ಬಗ್ಗೆ ತುಟಿ ಬಿಚ್ಚಬೇಡಿ: ಸಚಿವರಿಗೆ ಸಿಎಂ ಖಡಕ್ ವಾರ್ನಿಂಗ್..!

ಬೆಂಗಳೂರು: ಸಾರ್ವಜನಿಕರಲ್ಲಿ ಲಾಕ್ ಡೌನ್ ಬಗ್ಗೆ ಗೊಂದಲ ಮೂಡಿಸಬೇಡಿ. ಸಚಿವರು ಭಿನ್ನ ಹೇಳಿಕೆಗಳನ್ನು ನೀಡಬಾರದು ಎಂದು…