ಅಹಮದಾಬಾದ್: ನಮಸ್ತೆ ಟ್ರಂಪ್ ಕಾರ್ಯಕ್ರಮದಿಂದಲೇ ರಾಜ್ಯದಲ್ಲಿ ಕೊರೊನಾ ಹಬ್ಬಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ರಾಜ್ಯ ಬಿಜೆಪಿ ಸರ್ಕಾರ ಆಯೋಜಿಸಿದ್ದ ನಮಸ್ತೆ ಟ್ರಂಪ್ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡದ ಮೂಲಕ ಸ್ವತಂತ್ರ ತನಿಖೆಯಾಗಬೇಕು ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಚವ್ದಾ ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಗುಜರಾತ್ ಹೈಕೋರ್ಟ್ ಮೆಟ್ಟಿಲೇರುವುದಾಗಿ ಅಮಿತ್ ತಿಳಿಸಿದ್ದಾರೆ. ವೈರಸ್ ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡುತ್ತದೆ ಎಂದು ವಿಶ್ವ ಸಂಸ್ಥೆ ಮತ್ತೊಬ್ಬ ವ್ಯಕ್ತಿಗೆ ಹರಡುತ್ತದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟವಾಗಿ ಹೇಳಿದೆ. ದೊಡ್ಡ ಸಭೆ, ಸಮಾರಂಭಗಳನ್ನು ಆಯೋಜಿಸುವುದನ್ನು ತಡೆಯುವಂತೆ ಎಲ್ಲ ದೇಶಗಳಿಗೂ ಸೂಚಿಸಿತ್ತು. ಈ ನಡುವೆಯೂ ನಮಸ್ತೆ ಟ್ರಂಪ್ ಕಾರ್ಯಕ್ರಮ ಆಯೋಜಿಸುವ ಮೂಲಕ ಬಿಜೆಪಿ ಕೊರೊನಾ ಹರಡುವಿಕೆಗೆ ದಾರಿ ಮಾಡಿಕೊಟ್ಟಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Leave a Reply

Your email address will not be published. Required fields are marked *

You May Also Like

ಮದುವೆಯಾಗುವುದಾಗಿ ನಂಬಿಸಿ ಮೋಸ – ವಿವಾಹಿತೆ ಆತ್ಮಹತ್ಯೆಗೆ ಶರಣು!

ಮಂಡ್ಯ : ಮದುವೆಯಾಗುವುದಾಗಿ ನಂಬಿಸಿ ವ್ಯಕ್ತಿಯೊಬ್ಬ ಮೋಸ ಮಾಡಿದ್ದರ ಹಿನ್ನೆಲೆಯಲ್ಲಿ ನೊಂದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು, ಆಸ್ಪತ್ರೆಗೆ ದಾಖಲು

ಬೆಂಗಳೂರು:  ಪದ್ಮನಾಭನಗರ ಕ್ಷೇತ್ರದ ಬಿಜೆಪಿ ಶಾಸಕ, ಕಂದಾಯ ಸಚಿವ ಆರ್. ಅಶೋಕಗೆ ಕೋವಿಡ್ ಸೋಂಕು ತಗುಲಿದೆ.…

ರಾಜ್ಯದಲ್ಲಿ ಮತ್ತೊಂದು ಬಲಿ ಪಡೆದ ಮಹಾಮಾರಿ!

ಬೀದರ್: ಕೊರೊನಾಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ. ಈ ನಿಟ್ಟಿನಲ್ಲಿ ಸಾವಿನ ಸಂಖ್ಯೆ 45ಕ್ಕೆ ಏರಿಕೆ ಕಂಡಿದೆ.ಇಲ್ಲಿಯ…

ಆಮ್ಲಜನಕ ಪೂರೈಸುವಲ್ಲಿ ಸರ್ಕಾರ ಸಮರ್ಥವಿದೆ : ಸಚಿವ ಸುಧಾಕರ್

ಸರ್ಕಾರಿ ಆಸ್ಪತ್ರೆಗಳಲ್ಲಿ ಆಮ್ಲಜನಕ ಪೂರೈಸುವಲ್ಲಿ ನಮ್ಮ ಸರ್ಕಾರ ಸಮರ್ಥವಿದೆ. ಈಗಾಗಲೇ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್ ಮಾಡಿದ್ದಾರೆ.