ಹುಬ್ಬಳ್ಳಿ: ಇಲ್ಲಿಯ ಶಬರಿ ನಗರದ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶನ ಬೆತ್ತಲೆ ಪುರಾಣದ ಬಗ್ಗೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.

ವಿಡಿಯೋ ಕುರಿತು ಸ್ಪಷ್ಟನೆ ನೀಡಿರುವ ಅಯ್ಯಪ್ಪ ಸ್ವಾಮೀಜಿ ಮಠದ ಪೀಠಾದೀಶ ಮೋಹನ ಗುರುಸ್ವಾಮಿ, ಕುಸುಗಲ್ ರಸ್ತೆಯಲ್ಲಿರುವ ಸಿದ್ದಾರೂಡ ಮಠದಲ್ಲಿ ವಿಶ್ರಾಂತಿಗಾಗಿ ತಂಗಿದ್ದ ವೇಳೆ ನನ್ನ ವಸ್ತ್ರಗಳನ್ನು ಕಳಚಿ ವಿಡಿಯೋ ಮಾಡಲಾಗಿದೆ. ಶಬರಿ ನಗರದ ವಿಜಯ ಪೂಜಾರಿ ಹಾಗೂ ಶಂಕರ ಇದ್ದಲಿ ಎಂಬುವವರೇ ಈ ವಿಡಿಯೋ ಹರಿ ಬಿಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ.

ನನ್ನ ಏಳಿಗೆ ಸಹಿಸದೆ ನನ್ನ ವಸ್ತ್ರಗಳನ್ನು ತೆಗೆದು ನಗ್ನ ದೃಶ್ಯ ಸೆರೆ ಹಿಡಿದಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಕುರಿತು ನಾನು ಸೈಬರ್ ಪೊಲೀಸ್ ಠಾಣೆಗೆ ದೂರು ಸಲ್ಲಿಸುತ್ತೇನೆ ಎಂದು ಸ್ವಾಮೀಜಿ ಹೇಳಿದ್ದಾರೆ.

ಮೋಹನ್  ಗುರುಸ್ವಾಮಿ ಅವರ ಬೆತ್ತಲೆ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಇದು ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಅವರನ್ನು ಮಠದಿಂದ ಹೊರ ಕಳುಹಿಸಬೇಕೆಂಬ ಕೂಗು ಕೇಳಿ ಬಂದಿತ್ತು.

Leave a Reply

Your email address will not be published. Required fields are marked *

You May Also Like

ಪ್ರಕಾಶ್ ಜಾವ್ಡೇಕರ್ ಜೊತೆ ಬಿ.ಎಸ್.ವೈ ವಿಡಿಯೋ ಸಂವಾದ

ಸಿಎಂ ಬಿ.ಎಸ್.ಯಡಿಯೂರಪ್ಪ, ಪಶ್ಚಿಮ ಘಟ್ಟಗಳಲ್ಲಿ ಸೂಕ್ಷ್ಮ ಪರಿಸರ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಲವ್ ಜಿಹಾದ್ ಪ್ರಕರಣ ಕ್ರಮಕ್ಕೆ ಒತ್ತಾಯಿಸಿ ಲಕ್ಷ್ಮೇಶ್ವರದಲ್ಲಿ ಮನವಿ

ಪಟ್ಟಣದಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚುತ್ತಿದ್ದು, ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ.

ಜೀವ, ಜೀವನ ಮತ್ತು ಆರ್ಥಿಕತೆ ಮೇಲೆ ಕರೋನಾ ಪರಿಣಾಮ

ಕರೋನಾ ಮಾನವನ ಮೇಲೆ ಬೀರುವ ಪ್ರಭಾವವನ್ನು ವಿಶ್ವ ಕಣ್ಣಾರೆ ಕಂಡಿದೆ. ಇನ್ನು ರೂಪಾಂತರಿ ಕೊರೋನಾ ವೈರಸ್ ಕೊಡುತ್ತಿರುವ ಕಾಟವೂ ಅಷ್ಟಿಷ್ಟಲ್ಲ. ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇದು ಸರಕಾರಕ್ಕೆ ಆತಂಕ ಸೃಷ್ಟಿಸಿದೆ.ಮತ್ತೊಂದೆಡೆ ಕೊರೋನಾ ವೈರಸ್ ಮನುಷ್ಯನ ದೇಹದ ಮೇಲೆ ಅದರಲ್ಲಿಯೂ ಮಕ್ಕಳು, ಯುವಕರ ಮೇಲೆ ಬೀರುವ ದುಷ್ಪರಿಣಾಮಗಳ ಬಗ್ಗೆ ಮತ್ತೊಂದಿಷ್ಟು ಅಧ್ಯಯನಗಳು ನಡೆದಿವೆ.

ಪಿಜಿ ಬಾಡಿಗೆ ಹಣ ಕೊಡದಿದ್ದಕ್ಕೆ ಮಾಲಿಕ ಮಾಡಿದ್ದೇನು?

ಪಿಜಿ ಬಾಡಿಗೆ ನೀಡಿಲ್ಲವೆಂಬ ಕಾರಣಕ್ಕೆ ಯುವತಿಯರನ್ನು ಪಿಜಿ ಮಾಲೀಕ ಕೂಡಿ ಹಾಕಿದ ಘಟನೆ ನಗರದ ಕುವೆಂಪುನಗರ ಬಡಾವಣೆಯಲ್ಲಿ ನಡೆದಿದೆ.