ಧಾರವಾಡ: ಚಲಿಸುತ್ತಿದ್ದ ಲಾರಿಯಲ್ಲಿದ್ದ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಜಿಲ್ಲೆಯ ತೇಗೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪುಣೆಯಿಂದ ಬೆಂಗಳೂರಿನ ಕೈಗಾರಿಕಾ ಪ್ರದೇಶಕ್ಕೆ ಮಶೀನನ್ನು ಹೊತ್ತೊಯ್ಯುತ್ತಿದ್ದ ಲಾರಿಯಲ್ಲಿ ಚಲಿಸುತ್ತಿರುವಾಗ ತೇಗೂರು ಬಳಿ ಮಿನಿ ಲಾರಿ ಬರುತ್ತಿದ್ದಂತೆ ಲಾರಿಯಲ್ಲಿದ್ದ ಮಶಿನ್ ಗೆ ಬೆಂಕಿ ಹೊತ್ತಿಕೊಂಡಿರುವುದು ಕಂಡು ಬಂದಿದೆ. ಬೆಂಕಿ ಕಾಣಿಸಿಕೊಂಡಿದ್ದರಿಂದ ಆತಂಕಗೊಂಡ ಲಾರಿ ಚಾಲಕ, ಪಕ್ಕದಲ್ಲೇ ನೀರು ಇರುವುದನ್ನು ಕಂಡು ರಸ್ತೆ ಬದಿ ಲಾರಿ ನಿಲ್ಲಿಸಿ ಕೆಳಗಿಳಿದಿದ್ದಾನೆ.
ಕೂಡಲೇ ಜನರು ಬೆಂಕಿ ನಂದಿಸಿದ್ದಾರೆ. ಆದರೆ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.