ಮಂಗಳೂರು: ಹೂವಿನ ಬೆಳೆಗೆ ಎಕರೆಗೆ ರೈತ ಎಷ್ಟು ಖರ್ಚು ಮಾಡುತ್ತಾನೆ ಎಂಬ ಸಾಮಾನ್ಯ ಜ್ಞಾನವೂ ಸಿದ್ದರಾಮಯ್ಯರಿಗೆ ಇಲ್ಲ. ಮುಖ್ಯಮಂತ್ರಿಯಾಗಿ ಜವಾಬ್ದಾರಿ ‌ನಿರ್ವಹಿಸಿದ ಸಿದ್ದರಾಮಯ್ಯ ಈ ರೀತಿಯ ಟೀಕೆ ಮಾಡುವುದು ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು.

ಕೊರೋನಾ ವಿಶೇಷ ಪ್ಯಾಕೇಜ್ ಗೆ ಮಾಜಿ ಸಿ.ಎಂ ಸಿದ್ದರಾಮಯ್ಯ ಟೀಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮಾತನಾಡಿದ ಅವರು ಎಕರೆ ಪ್ರದೇಶದಲ್ಲಿ ಹೂವಿನ ಬೆಳೆಗೆ 50 ಲಕ್ಷ ಖರ್ಚು ಮಾಡುತ್ತಾನೆ ಎಂಬ ಹೇಳಿಕೆ ಅವರಲ್ಲಿನ ಜ್ಞಾನದ ಮಟ್ಟವನ್ನು ಸೂಚಿಸುತ್ತದೆ. ಹೂವಿನ ಬೆಳೆಗೆ ಎಕರೆಗೆ 50 ಲಕ್ಷ ಎಲ್ಲಿ ಖರ್ಚು ಮಾಡಲಾಗುತ್ತೆ ಎಂಬ ಬಗ್ಗೆ ಅಧ್ಯಯನ ಮಾಡಲಿ. ಸಿದ್ದರಾಮಯ್ಯನವರು ಯೋಚನೆ ಮಾಡಿ ಮಾತಾಡೋದು ಒಳ್ಳೆಯದು ಎಂದು ಸಲಹೆ ನೀಡಿದರು.

ರಾಹುಲ್ ಗಾಂಧಿ ಬಟಾಟೆಯಲ್ಲಿ ಚಿನ್ನ ತೆಗೆದ ರೀತಿಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ. ಸಂಕಷ್ಟದ ಈ ಸಂದರ್ಭದಲ್ಲಿ ರಾಜಕೀಯ ಮಾಡುವ ಹೇಯ ಕೃತ್ಯ ಸಿದ್ದರಾಮಯ್ಯ ನಡೆಸಿದ್ದಾರೆ. ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸವನ್ನು ಮಾಡಿದ್ದಾರೆ. ಕಾಂಗ್ರೆಸ್ ಕೇವಲ ರಾಜಕಾರಣಕ್ಕಾಗಿ ಈ ಕಾಲಘಟ್ಟವನ್ನು ಉಪಯೋಗಿಸಿದೆ ಹೀಗಾಗಿ ಸಿದ್ದರಾಮಯ್ಯರಂತ ಹಿರಿಯರು ಈ ರೀತಿ ಟೀಕೆ ಮಾಡುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಸಿದ್ದರಾಮಯ್ಯ ಸರ್ಕಾರದ ಸಂದರ್ಭದಲ್ಲಿ ರೈತರ ಆತ್ಮಹತ್ಯೆ ಆಯ್ತು ಆಗ ಯಾಕೆ ರೈತರಿಗೆ, ಕೃಷಿಕರಿಗೆ ಯೋಜನೆ ಘೋಷಣೆ ಮಾಡಿಲ್ಲ. ಯಡಿಯೂರಪ್ಪನವರು ಕೊಟ್ಟಿರುವ ಯೋಜನೆ ಅಭೂತಪೂರ್ವವಾದುದು. ಹೀಗಾಗಿ ಬಿಎಸ್ವೈ ಯೋಜನೆಯನ್ನು ಸ್ವಾಗತ ಮಾಡಲು ಮನಸ್ಸು ಇಲ್ಲದ ನೀವು ಕ್ಷುಲ್ಲಕ ರಾಜಕಾರಣ ಮಾಡ್ತಿದ್ದೀರಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಕೊರೋನಾ ಸೋಂಕು ಪರೀಕ್ಷೆ ನಡೆಸಿದ್ದು ಎಷ್ಟು ಜನರಿಗೆ ಗೊತ್ತೆ?

ಕೊರೋನಾ ಸೋಂಕು ಪತ್ತೆ ಕಾರ್ಯ ಕೂಡ ರಾಜ್ಯದಲ್ಲಿ ತೀವ್ರಗತಿಯಲ್ಲಿ ನಡೆದಿದ್ದು, ಈಗಾಗಲೇ 1 ಲಕ್ಷ ಜನರನ್ನು ಸೋಕು ಪರೀಕ್ಷೆಗೆ ಒಳಪಡಿಸಲಾಗಿದೆ.

ರೋಣ ತಾಲೂಕು ಗ್ರಾಪಂ ಅಧ್ಯಕ್ಷ- ಉಪಾಧ್ಯಕ್ಷ ಮೀಸಲಾತಿ ಪ್ರಕಟ

ರೋಣ: ತಾಲೂಕಿನ 24 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಆಯ್ಕೆ ಪ್ರಕ್ರಿಯೆ ವೀರಭದ್ರೇಶ್ವರ ಕಲ್ಯಾಣ…

ಸೌರ ಚಾಲಿತ ಕೃಷಿ ಪಂಪ್ ಸೆಟ್ ಗೆ ಆನ್ಲೈನ್ ಅಜಿ೯ – ಸವಿತಾ ಮೇಟಿ

ಆಲಮಟ್ಟಿ : ಕೇಂದ್ರ ಸರ್ಕಾರದ ಪಿಎಂ ಕುಸುಮ ಕಂಪೋನೆಟ್ ಬಿ ಯೋಜನೆ ಯಡಿ ಮೊದಲನೆ ಹಂತದಲ್ಲಿ…

ಅರಣ್ಯಾಧಿಕಾರಿ ವರ್ಗಾವಣೆಯಲ್ಲಿ ರಾಜಕೀಯ?

ಜಿಲ್ಲೆಯಲ್ಲೀಗ ಮತ್ತೆ ಮರಗಳ್ಳ ಮಾಫಿಯಾಕ್ಕೆ ರೆಕ್ಕೆ ಪುಕ್ಕ ಬರಲಿದೆಯಾ? ಎಂಬ ಅನುಮಾನ ಉಡುಪಿ ಜಿಲ್ಲೆಯ ಜನರಲ್ಲಿ ಶುರುವಾಗಿದೆ. ಇದರ ಹಿಂರುವುದು ರಾಜಕೀಯ ಕಾರಣ ಎನ್ನುವ ಅನುಮಾನ ವ್ಯಕ್ತವಾಗಿದೆ.