ವಿಶಾಖಪಟ್ಟಣ ದುರ್ಘಟನೆ: ಸಾವಿನ ಸಂಖ್ಯೆ 10ಕ್ಕೆ ಏರಿಕೆ

ವಿಶಾಖಪಟ್ಟಣ: ಇಲ್ಲಿನ ಗೋಪಾಲಪಟ್ಟಣದ, ನಾಯ್ಡು ತೋಟಾ ಸಮೀಪದ ಆರ್ ಆರ್ ವೆಂಕಟಪುರಂನಲ್ಲಿರುವ ಎಲ್ ಜಿ ಪಾಲಿಮರ್ಸ್ ಇಂಡಸ್ಟ್ರೀಯಲ್ಲಿ ವಿಷಾನಿಲ ಸೋರಿಕೆಯಾಗಿದ್ದು ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಬ್ಬರು ವೃದ್ಧರು, 7 ವರ್ಷದ ಬಾಲಕಿ ಸೇರಿದಂತೆ ಒಟ್ಟು 10  ಮಂದಿ ಈ ವರೆಗೂ ಈ ದುರ್ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. 170ಕ್ಕೂ ಅಧಿಕ ಜನರು ಅಸ್ವಸ್ಥರಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಮುಂಜಾನೆ ಸುಮಾರು 3 ಗಂಟೆ ಹೊತ್ತಿನಲ್ಲಿ ವಿಶಾಖಪಟ್ಟಣಂನ, ಗಾಳಿಯಲ್ಲಿ ವಿಷಾನಿಲ ಸುತ್ತಮುತ್ತಲ ಪ್ರದೇಶಗಳಿಗೆ  ಹರಡಿದೆ. ಪರಿಣಾಮ ಆ ಪ್ರದೇಶದ ಸುತ್ತಲಿನ ಜನರು ವಿಷಾನೀಲವನ್ನು ಉಸಿರಾಡಿದ ಕೂಡಲೇ ಅಸ್ವಸ್ಥರಾಗಿದ್ದಾರೆ. ವಿಷಾನಿಲ ಸೋರಿಕೆಯಿಂದಾಗಿ ಕಾರ್ಖಾನೆಯ ಸುಮಾರು 5 ಕಿ.ಮೀ ವ್ಯಾಪ್ತಿಯಲ್ಲಿ ಆತಂಕ  ಸೃಷ್ಟಿಯಾಗಿದ್ದು, ಗೋಪಾಲಪಟ್ಟಣಂ ಸುತ್ತಲಿನ ಐದು ಗ್ರಾಮಗಳಲ್ಲಿನ ಜನರಿಗೆ ಉಸಿರಾಟದ ತೊಂದರೆ ಮತ್ತು ಗಂಟಲು ಕೆರೆತ ಸಮಸ್ಯೆ ಆರಂಭವಾಗಿದೆ. ನೂರಾರು ಮಂದಿ ಉಸಿರಾಟದ ಸಮಸ್ಯೆ, ಗಂಟಲು ನೋವು, ಕಣ್ಣಿನ ಉರಿ, ಹೊಟ್ಟೆ ನೋವು, ಇತರೆ ಸಮಸ್ಯೆಗಳಿಂದಾಗಿ ಆಸ್ಪತ್ರೆಗೆ  ದಾಖಲಾಗುತ್ತಿದ್ದಾರೆ. ಅಸ್ವಸ್ಥರನ್ನು ಆಸ್ಪತ್ರೆಗೆ ರವಾನಿಸಲು ಇದೀಗ ಆ್ಯಂಬುಲೆನ್ಸ್ ಗಳನ್ನು ಮತ್ತು ಸರ್ಕಾರಿ ಸಾರಿಗೆ ಬಸ್ ಗಳನ್ನು ಕೂಡ ನಿಯೋಜನೆ ಮಾಡಲಾಗಿದೆ.

Exit mobile version