ಚಿಕ್ಕಮಗಳೂರು:  ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ. ಪ್ರತಿ ದಿನ ಸಂಜೆ 7.30ರಿಂದ 8.30ರ ವರೆಗೆ ಪಾಠ ಮಾಡುತ್ತಿದ್ದಾರೆ.

ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ದತ್ತ ಅವರು ಮುಂದಾಗಿದ್ದಾರೆ. ಜೂನ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದತ್ತ ಅವರು ಮಕ್ಕಳಿಗೆ ಮನೆ ಪಾಠ ಮಾಡುತ್ತಿದ್ದಾರೆ. ಸದ್ಯ ವಿದ್ಯಾರ್ಥಿಗಳಿಗೆ ಗಣಿತ ಪಾಠ ಆರಂಭಿಸಿದ್ದಾರೆ.

ಎರಡು ವಾರಗಳ ಕಾಲ ಮಕ್ಕಳಿಗೆ ಫೇಸ್ ಬುಕ್ ಲೈವ್ನಲ್ಲಿ ಪಾಠ ಮಾಡಲಿದ್ದಾರೆ. ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಈ ಹಿಂದೆ ಅವರು ಶಾಸಕರಾಗಿದ್ದಾಗಲೂ ಕೂಡ ಶಿಕ್ಷಕರ ದಿನಾಚರಣೆಯಂದು ಮಕ್ಕಳಿಗೆ ಪಾಠ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

ಮಾರ್ಗ ಮಧ್ಯೆ ಅಡ್ಡಗಟ್ಟಿ ಯುವಕನ ಬರ್ಬರ ಕೊಲೆ!

ಬೆಂಗಳೂರು : ಬೈಕ್ ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಯುವಕನನ್ನು ಮಾರ್ಗ ಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ನನ್ನ ಮಗ ದೇಶಕ್ಕಾಗಿ ಪ್ರಾಣ ಬಿಟ್ಟಿದ್ದಾನೆ – ಹುತಾತ್ಮ ಯೋಧನ ತಂದೆ!

ಇರುವ ಒಬ್ಬನೇ ಮಗನನ್ನು ಕಳೆದುಕೊಂಡಿರುವುದಕ್ಕೆ ನಮಗೆ ತುಂಬಾ ದುಃಖವಾಗುತ್ತಿದೆ. ಆದರೆ ನನ್ನ ಮಗ ದೇಶಕ್ಕಾಗಿ ತನ್ನ ಪ್ರಾಣಾರ್ಪಣೆ ಮಾಡಿದ್ದಕ್ಕೆ ಹೆಮ್ಮೆ ಇದೆ ಎಂದು ಗಲ್ವಾನ್ ನಲ್ಲಿ ಚೀನಾ ಯೋಧರ ದಾಳಿಗೆ ಬಲಿಯಾದ ಕರ್ನಲ್ ಸಂತೋಷ್ ಬಾಬಿ ಪೋಷಕರು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮಫಲಕಕ್ಕೆ ಕಪ್ಪು ಮಸಿ

: ಮಹರಾಷ್ಟ್ರದಲ್ಲಿ ಕನ್ನಡ ಭಾಷೆ ನಾಮಫಲಕಕ್ಕೆ ಮಸಿ ಬಳೆದು ಅವಮಾನ ಮಾಡಿದ್ದು ವಿರೋಧಿಸಿ ಕರವೇ (ಶಿವರೇಗೌಡ ಬಣ) ಜಿಲ್ಲಾಧ್ಯಕ್ಷ ನೇತೃತ್ವದಲ್ಲಿ ಬೆಳಗಾವಿಯಲ್ಲಿ ಮರಾಠಿ ಭಾಷಾ ನಾಮ ಫಲಕಕ್ಕೆ ಮಸಿ ಬಳೆದು ವಿರೋಧ ವ್ಯಕ್ತಪಡಿಸಿದರು.

ಗದಗನಲ್ಲಿ ಮತ್ತೆ ನಾಲ್ಕು ಕೊರೋನಾ ಪಾಸಿಟಿವ್

ಕೊರೋನಾ ಸೋಂಕು ಮುಕ್ತವಾಗಿದ್ದ ಗದಗ ಜಿಲ್ಲೆಯಲ್ಲಿ ಕಳೆದೆರಡು ದಿನಗಳ ಹಿಂದಷ್ಟೆ ಮೂರು ಕೊರೋನಾ ಪಾಸಿಟ್ ಕೇಸ್ ಪತ್ತೆಯಾಗಿದ್ದವು. ಇದರ ಬೆನ್ನಲ್ಲೆ ಇದೀಗ ಇಂದು ಮತ್ತೆ ನಾಲ್ಕು ಪಾಸಿಟಿವ್ ಕೇಸ್ ದೃಢಪಟ್ಟಿವೆ.