ಚಿಕ್ಕಮಗಳೂರು: ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ. ಪ್ರತಿ ದಿನ ಸಂಜೆ 7.30ರಿಂದ 8.30ರ ವರೆಗೆ ಪಾಠ ಮಾಡುತ್ತಿದ್ದಾರೆ.
ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ದತ್ತ ಅವರು ಮುಂದಾಗಿದ್ದಾರೆ. ಜೂನ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದತ್ತ ಅವರು ಮಕ್ಕಳಿಗೆ ಮನೆ ಪಾಠ ಮಾಡುತ್ತಿದ್ದಾರೆ. ಸದ್ಯ ವಿದ್ಯಾರ್ಥಿಗಳಿಗೆ ಗಣಿತ ಪಾಠ ಆರಂಭಿಸಿದ್ದಾರೆ.
ಎರಡು ವಾರಗಳ ಕಾಲ ಮಕ್ಕಳಿಗೆ ಫೇಸ್ ಬುಕ್ ಲೈವ್ನಲ್ಲಿ ಪಾಠ ಮಾಡಲಿದ್ದಾರೆ. ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಈ ಹಿಂದೆ ಅವರು ಶಾಸಕರಾಗಿದ್ದಾಗಲೂ ಕೂಡ ಶಿಕ್ಷಕರ ದಿನಾಚರಣೆಯಂದು ಮಕ್ಕಳಿಗೆ ಪಾಠ ಮಾಡಿದ್ದರು.