ಚಿಕ್ಕಮಗಳೂರು:  ಮಾಜಿ ಶಾಸಕ ವೈ.ಎಸ್.ವಿ. ದತ್ತ ಅವರು ಈಗ ಮೇಷ್ಟ್ರ ಆಗಿದ್ದಾರೆ. ಸದ್ಯ ಅವರು ಎಸ್ಸೆಸ್ಸೆಲ್ಸಿ ಮಕ್ಕಳಿಗೆ ಫೇಸ್ ಬುಕ್ ಲೈವ್ ನಲ್ಲಿ ಪಾಠ ಮಾಡುತ್ತಿದ್ದಾರೆ. ಪ್ರತಿ ದಿನ ಸಂಜೆ 7.30ರಿಂದ 8.30ರ ವರೆಗೆ ಪಾಠ ಮಾಡುತ್ತಿದ್ದಾರೆ.

ಒಂದು ವಾರ ಗಣಿತ, ಮತ್ತೊಂದು ವಾರ ಭೌತಶಾಸ್ತ್ರ ಪಾಠ ಮಾಡಲು ದತ್ತ ಅವರು ಮುಂದಾಗಿದ್ದಾರೆ. ಜೂನ್ ಮೊದಲ ವಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದತ್ತ ಅವರು ಮಕ್ಕಳಿಗೆ ಮನೆ ಪಾಠ ಮಾಡುತ್ತಿದ್ದಾರೆ. ಸದ್ಯ ವಿದ್ಯಾರ್ಥಿಗಳಿಗೆ ಗಣಿತ ಪಾಠ ಆರಂಭಿಸಿದ್ದಾರೆ.

ಎರಡು ವಾರಗಳ ಕಾಲ ಮಕ್ಕಳಿಗೆ ಫೇಸ್ ಬುಕ್ ಲೈವ್ನಲ್ಲಿ ಪಾಠ ಮಾಡಲಿದ್ದಾರೆ. ಜೆಡಿಎಸ್ ಮುಖಂಡ ಹಾಗೂ ಮಾಜಿ ಶಾಸಕ ವೈ.ಎಸ್.ವಿ. ದತ್ತ ಮೂಲತಃ ಶಿಕ್ಷಕರು. ನಂತರ ಶಿಕ್ಷಕ ವೃತ್ತಿಯಿಂದ ರಾಜಕಾರಣಕ್ಕೆ ಬಂದಿದ್ದರು. ಈ ಹಿಂದೆ ಅವರು ಶಾಸಕರಾಗಿದ್ದಾಗಲೂ ಕೂಡ ಶಿಕ್ಷಕರ ದಿನಾಚರಣೆಯಂದು ಮಕ್ಕಳಿಗೆ ಪಾಠ ಮಾಡಿದ್ದರು.

Leave a Reply

Your email address will not be published. Required fields are marked *

You May Also Like

ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಆಕ್ರೋಶ: ಸರ್ಕಾರದ ಕೆಟ್ಟ ಧೋರಣೆ ನಿಲ್ಲುವವರೆಗೂ ನಮ್ಮ ಹೋರಾಟ ನಿಲ್ಲದು

ಸರ್ಕಾರದ ಕೆಟ್ಟ ಧೋರಣೆಗಳು ಎಲ್ಲಿಯವರೆಗೆ ನಡೆಯುತ್ತವೇಯೋ ಅಲ್ಲಿಯವರೆಗೆ ನಮ್ಮ ಹೋರಾಟ ನಿಲ್ಲುವದಿಲ್ಲ ನಮ್ಮ ಕಾರ್ಮಿಕ ವರ್ಗದವರು ಅನುಭವಿಸುವ ನೋವು ಸರ್ಕಾರಕ್ಕೆ ಗೊತ್ತಾಗುತ್ತಿಲ್ಲ ಎಂದು ಕಾರ್ಮಿಕ ಮುಖಂಡ ಮಹೇಶ್ ಹಿರೇಮಠ ಸರ್ಕಾರದ ವಿರುದ್ಧ ಕಿಡಿಕಾರಿದರು.

ಕೊರೋನಾ : ನಗರ ಪ್ರದೇಶಗಳ ಆತಂಕ

ನವದೆಹಲಿ : ಕೊರೊನಾದಿಂದಾಗಿ ನಗರ ಪ್ರದೇಶಗಳು ಅಕ್ಷರಶಃ ಆತಂಕದಲ್ಲಿ ಇವೆ. ಕೊರೊನಾದಿಂದಾಗಿ ನಿರುದ್ಯೋಗ, ಬಡತನ, ಅಸಮಾನತೆ…

ಗಜೇಂದ್ರಗಡ : ಬಂದ್ ಕರೆಗೆ ಕೋಟೆ ನಾಡು ಸ್ಥಬ್ಧ..!

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ ವಿರೋಧಿ ವಿವಿಧ ಸಂಘಟನೆಗಳಿಂದ ನೀಡಿದ ಕರ್ನಾಟಕ ಬಂದ್ ಕರೆಗೆ ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಉತ್ತಮ ಬೆಂಬಲ ವ್ಯಕ್ತವಾಯಿತು.

ಕೊಪ್ಪಳದಲ್ಲಿ ಇಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್

ಕೊಪ್ಪಳ: ಕೊಪ್ಪಳದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಗಡಿ ಸುಟ್ಟು ಹೊಗಿರುವ ಘಟನೆ ಇಂದು ಬೆಳಿಗ್ಗೆ…