ಬೆಂಗಳೂರು: ಕೊರೋನಾ ಸೋಂಕಿಗೆ ಸಂಬಂಧಪಟ್ಟಂತೆ ಇವತ್ತಿನ ಅಂಕಿಸಂಖ್ಯೆಯನ್ನು ಗಮನಿಸಿದರೆ ತುಸು ಸಮಾಧಾನವೇ ಸರಿ. ಸೋಂಕಿತರ ಪ್ರಮಾಣ ಕಡಿಮೆಯಾಗುತ್ತಿದೆ ಎನ್ನುವ ಸಮಾಧಾನ ಜನರಲ್ಲಿ ಮೂಡುವಂತಿದೆ. ಆದರೆ ದಾವಣಗೆರೆ, ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲೆಯಲ್ಲಿ ಇಂದು ಮತ್ತೆ ತಲಾ ಮೂರು ಸೋಂಕಿತರು ಪತ್ತೆಯಾಗಿದ್ದಾರೆ. ಇನ್ನುಳಿದಂತೆ ಧಾರವಾಡ, ಬೆಳಗಾವಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ತಲಾ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ 705ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 12 ಕೊರೋನಾ ಪಾಸಿಟಿವ್ ಕೇಸ್ ಪತ್ತೆ
