ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ನಾಳೆಯಿಂದ ಲಾಡ್ಜ್‌, ಬಾರ್‌ ಹಾಗೂ ಕ್ಲಬ್‌ಗಳಲ್ಲಿ ಮದ್ಯ ಮಾರಾಟಕ್ಕೆ ರಾಜ್ಯ ಸರ್ಕಾರ ಅವಕಾಶ ನೀಡಿದೆ.

ಇತ್ತೀಚೆಗಷ್ಟೇ ಲಾಕ್‌ಡೌನ್‌ ಸಡಿಲಿಕೆಯಾದ ನಂತರ ಎಂಆರ್‌ಪಿ ಮಳಿಗೆ ಹಾಗೂ ಎಂಎಸ್ಐಎಲ್ ಸ್ಟಾಲ್‌ಗಳಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು. ಆದರೆ, ಮದ್ಯವನ್ನು ಎಂಆರ್‌ಪಿ ಬೆಲೆಗೆ ಮಾರಾಟ ಮಾಡಬೇಕು. ಹೆಚ್ಚಿನ ಬೆಲೆಗೆ ಮಾರಿದರೆ ಲೈಸೆನ್ಸ್ ಖಾಯಂ ಆಗಿ ರದ್ದುಗೊಳಿಸಲಾಗುವುದು ಎಂದು ಅಬಕಾರಿ ಇಲಾಖೆ ಎಚ್ಚರಿಸಿದೆ.

ಬಾರ್‌, ಕ್ಲಬ್‌ಗಳಲ್ಲಿಯೂ ಬೆಳಿಗ್ಗೆ 9 ರಿಂದ ಸಂಜೆ 7 ರ ವರೆಗೆ ಮಾತ್ರ ಮದ್ಯ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ಈ ವರ್ಷ ಸರಕಾರಕ್ಕೆ ಅಬಕಾರಿ ಆದಾಯ ರೂ. 25 ಸಾವಿರ ಕೋಟಿ ರೂ. ಬರಲಿದ್ದು, ಹೆಚ್ಚುವರಿಯಾಗಿ 2500 ಕೋಟಿ ರೂ. ಆದಾಯ ಬರಲಿದೆ. ಐದನೇ ದಿನಕ್ಕೆ 122.16 ಕೋಟಿ ತೆರಿಗೆ ಸಂಗ್ರಹ ಆಗಿದ್ದು, ಸರ್ಕಾರಕ್ಕೆ ಒಟ್ಟು 767 ಕೋಟಿ ರೂ. ಆದಾಯ ಬಂದಿದೆ. ಈ ಆದಾಯ ವಾರದಲ್ಲಿ ಸಾವಿರ ಕೋಟಿ ರೂ.ಗೆ ಮುಟ್ಟುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಆನ್‌ಲೈನ್ ಮದ್ಯ ಮಾರಾಟದ ಬಗ್ಗೆಯೂ ಅಬಕಾರಿ ಸಚಿವರು ಮಾಹಿತಿ ನೀಡಿದ್ದು, ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸರ್ಕಾರ ಸ್ವಾಗತಿಸುತ್ತದೆ. ಸಂದರ್ಭ ಬಂದರೆ ಆನ್‌ಲೈನ್ ಮಾರಾಟಕ್ಕೆ ಗ್ರೀನ್ ಸಿಗ್ನಲ್ ನೀಡಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

5 ಕೆಜಿ ಅಕ್ಕಿ, 1 ಕೆಜಿ ಬೇಳೆ ನವೆಂಬರ್ ವರೆಗೆ ವಿತರಿಸಲಾಗುವುದು: ನರೇಂದ್ರ ಮೋದಿ

ದೆಹಲಿ: ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯನ್ನು ನವೆಂಬರ್ ಅಂತ್ಯದವರೆಗೂ ವಿಸ್ತರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ…

ಗಾಂಧಿ ಕುಟುಂಬದ 3 ಟ್ರಸ್ಟ್ ವ್ಯವಹಾರ ತನಿಖೆಗೆ ಆದೇಶಿಸಿದ ಕೇಂದ್ರ ಸರಕಾರ

ನವದೆಹಲಿ: ಗಾಂಧಿ ಕುಟುಂಬಕ್ಕೆ ಸಂಬಂಧಿಸಿದ ಮೂರು ಟ್ರಸ್ಟ್ ವ್ಯವಹಾರಗಳ ಕುರಿತು ತನಿಖೆಗೆ ಕೇಂದ್ರ ಗೃಹ ಇಲಾಖೆ ಬುಧವಾರ ತನಿಖೆಗೆ ಆದೇಶಿಸಿದೆ.

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.