ನವದೆಹಲಿ: ದೇಶದಲ್ಲಿ ಕೊರೊನಾ ಚೇತರಿಕೆ ಕಾಣುತ್ತಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ ಅಗರವಾಲ್ ಅವರು, ದೇಶದ 216 ಜಿಲ್ಲೆಗಳಲ್ಲಿ ಯಾವುದೇ ಕೊರೊನಾ ಪ್ರಕರಣಗಳು ದಾಖಲಾಗಿಲ್ಲ. 42 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಿಂದ ಯಾವುದೇ ಹೊಸ ಕೊರೊನಾ ವರದಿಯಾಗಿಲ್ಲ ಎಂದು ಹೇಳಿದ್ದಾರೆ.

ಕಳೆದ 21 ದಿನಗಳಿಂದ ದೇಶದ 28 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ಕಳೆದ 14 ದಿನಗಳಿಂದ 36 ಜಿಲ್ಲೆಗಳಲ್ಲಿ ಮತ್ತು ಕಳೆದ ಏಳು ದಿನಗಳಿಂದ 46 ಜಿಲ್ಲೆಗಳಲ್ಲಿ ಯಾವುದೇ ಹೊಸ ಪ್ರಕರಣ ವರದಿಯಾಗಿಲ್ಲ. ಭಾರತದಲ್ಲಿ ಚೇತರಿಕೆ ಪ್ರಮಾಣ ಶೇ. 29.36ರಷ್ಟು ಇದೆ ಎಂದರು.

ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 3,390 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 56,342 ಏರಿಕೆಯಾಗಿದೆ.

Leave a Reply

Your email address will not be published. Required fields are marked *

You May Also Like

ಬೀದರ್: ಅನಾವಶ್ಯಕ ವಾಹನಗಳೊಂದಿಗೆ ರಸ್ತೆಗಿಳಿದಿರಾ.. ಹುಷಾರ್..!

ಬೀದರ್: ಈಗಾಗಲೇ ಕೊರೋನಾ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದರಿಂದ ಬೀದರ್ ಜಿಲ್ಲೆಯನ್ನು ರೆಡ್ ಝೋನ್ ಎಂದು ಘೋಷಿಸಲಾಗಿದೆ.…

ಸರಳ ಗಣರಾಜ್ಯೋತ್ಸವ ಆಲಮಟ್ಟಿ ಪ್ರವಾಸಿ ತಾಣ ಉತ್ತೇಜನಕ್ಕೆ ಸಂಕಲ್ಪ- ಎಚ್.ಸುರೇಶ್

ಆಲಮಟ್ಟಿ: ಈ ಭಾಗದ ಪ್ರವಾಸಿ ತಾಣವಾಗಿ ಖ್ಯಾತಿ ಪಡೆಯುತ್ತಿರುವ ಆಲಮಟ್ಟಿಯನ್ನು ಇನ್ನಷ್ಟು ಪ್ರವಾಸಿಗರನ್ನು ಇತ್ತ ಆಕಷಿ೯ಸಿ…

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.

ಜನರ ಹಣ, ಜನರಿಗೆ ಲೆಕ್ಕ ಕೊಡಬೇಕು: ಸಿದ್ದರಾಮಯ್ಯ

ಬೆಂಗಳೂರು: ಹಲವು ಮಂದಿ ತಜ್ಞರು ಕೇವಲ ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮನೋವಿಕಾಸ ಸಾಧ್ಯವಿಲ್ಲ ಎಂದು ಅಭಿಪ್ರಾಯ…